Kundapra.com ಕುಂದಾಪ್ರ ಡಾಟ್ ಕಾಂ

ಡಾ. ಗೋವಿಂದ ಬಾಬು ಪೂಜಾರಿ ಅವರಿಗೆ ನ್ಯೂಸ್ ಪೇಪರ್ ಆಸೋಸಿಯೇಷನ್ ಆಫ್ ಕರ್ನಾಟಕದ ಕನ್ನಡ ರಾಜ್ಯೋತ್ಸವ ಪ್ರಶಸ್ತಿ

ಕುಂದಾಪ್ರ ಡಾಟ್ ಕಾಂ ಸುದ್ದಿ.
ಕುಂದಾಪುರ:
ನ್ಯೂಸ್ ಪೇಪರ್ ಆಸೋಸಿಯೇಷನ್ ಆಫ್ ಕರ್ನಾಟಕ ಸಂಸ್ಥೆಯ ವತಿಯಿಂದ ಬೆಂಗಳೂರು ವೈದ್ಯಕೀಯ ಮಹಾವಿದ್ಯಾಲಯ ಸಭಾಂಗಣದಲ್ಲಿ ಆಯೋಜಿಸಿದ ಸಮಾರಂಭದಲ್ಲಿ ಉದ್ಯಮಿ, ಸಮಾಜ ಸೇವಕ ಡಾ. ಗೋವಿಂದ ಬಾಬು ಪೂಜಾರಿ ಅವರಿಗೆ ಕನ್ನಡ ರಾಜ್ಯೋತ್ಸವ ಪ್ರಶಸ್ತಿ ನೀಡಿ ಗೌರವಿಸಲಾಯಿತು.

ಈ ಸಂದರ್ಭ ವಿದ್ಯಾವಾಚಸ್ಪತಿ ಶ್ರೀ ಸಂತೋಷ ಭಾರತಿ ಗುರೂಜಿ, ವಿಧಾನ ಪರಿಷತ್ ಸಭಾಪತಿಗಳಾದ ಬಸವರಾಜ್ ಹೊರಟ್ಟಿ, ಮಾಜಿ ವಿಧಾನ ಪರಿಷತ್ ಸದಸ್ಯರಾದ ಟಿ. ಎ. ಶರವಣ, ಚಿತ್ರನಟಿಯರಾದ ನಟಿ ಶೃತಿ, ಹರ್ಷಿಕಾ ಪೂಣಚ್ಚ, ನ್ಯೂಸ್ ಪೇಪರ್ ಆಸೋಸಿಯೇಷನ್ ಅಧ್ಯಕ್ಷರಾದ ಶ್ರಾವಣ್ ಲಕ್ಷಣ್ ಉಪಸ್ಥಿತರಿದ್ದರು.

Exit mobile version