Kundapra.com ಕುಂದಾಪ್ರ ಡಾಟ್ ಕಾಂ

ಬೃಹತ್ ಉಚಿತ ಹೃದಯ ಆರೋಗ್ಯ ತಪಾಸಣಾ ಶಿಬಿರ

ಕುಂದಾಪ್ರ ಡಾಟ್ ಕಾಂ ಸುದ್ದಿ.
ಗಂಗೊಳ್ಳಿ:
ರೋಟರಿ ಕ್ಲಬ್ ಗಂಗೊಳ್ಳಿ, ಲಯನ್ಸ್ ಕ್ಲಬ್ ಕುಂದಾಪುರ, ರೋಟರ‍್ಯಾಕ್ಟ್ ಕ್ಲಬ್ ಗಂಗೊಳ್ಳಿ ಹಾಗೂ ಕಸ್ತೂರ್ಬಾ ಆಸ್ಪತ್ರೆ ಮಣಿಪಾಲ ಇವರ ಜಂಟಿ ಆಶ್ರಯದಲ್ಲಿ ಮಣಿಪಾಲದ ಕೆಎಂಸಿ ಆಸ್ಪತ್ರೆಯ ತಜ್ಞ ವೈದ್ಯರ ನೇತೃತ್ವದಲ್ಲಿ ಬೃಹತ್ ಉಚಿತ ಹೃದಯ ಆರೋಗ್ಯ ತಪಾಸಣಾ ಶಿಬಿರ ಗಂಗೊಳ್ಳಿಯ ಸರಸ್ವತಿ ವಿದ್ಯಾಲಯ ಪದವಿಪೂರ್ವ ಕಾಲೇಜಿನ ಸಭಾಂಗಣದಲ್ಲಿ ಮಂಗಳವಾರ ನಡೆಯಿತು.

ಗಂಗೊಳ್ಳಿ ರೋಟರಿ ಕ್ಲಬ್ ಅಧ್ಯಕ್ಷ ರಾಜೇಶ ಎಂ.ಜಿ. ಶಿಬಿರ ಉದ್ಘಾಟಿಸಿ ಶುಭ ಹಾರೈಸಿದರು. ಕುಂದಾಪುರ ಲಯನ್ಸ್ ಕ್ಲಬ್ ಅಧ್ಯಕ್ಷ ರಾಧಕೃಷ್ಣ ನಾಯ್ಕ್ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು. ಮಣಿಪಾಲ ಕೆಎಂಸಿ ಆಸ್ಪತ್ರೆಯ ವೈದ್ಯ ಡಾ.ಪಾರ್ಥ, ಕುಂದಾಪುರ ಲಯನ್ಸ್ ಕ್ಲಬ್ ಮಾಜಿ ಅಧ್ಯಕ್ಷ ರಾಜೀವ ಕೋಟ್ಯಾನ್, ಡಾ.ರವೀಂದ್ರ, ಗಂಗೊಳ್ಳಿ ರೋಟರಿ ಕ್ಲಬ್ ಸದಸ್ಯರು, ಕೆಎಂಸಿ ಆಸ್ಪತ್ರೆಯ ವೈದ್ಯರು, ಸಿಬ್ಬಂದಿಗಳು ಮತ್ತಿತರರು ಉಪಸ್ಥಿತರಿದ್ದರು.

ರಾಜೇಶ ಎಂ.ಜಿ. ಸ್ವಾಗತಿಸಿದರು. ಜೋನಲ್ ಲೆಫ್ಟಿನೆಂಟ್ ಕೆ.ರಾಮನಾಥ ನಾಯಕ್ ಪ್ರಾಸ್ತಾವಿಕ ಮಾತುಗಳನ್ನಾಡಿದರು. ರೋಟರಿ ಕಾರ್ಯದರ್ಶಿ ನಾರಾಯಣ ಇ.ನಾಯ್ಕ್ ಕಾರ್ಯಕ್ರಮ ನಿರ್ವಹಿಸಿದರು. ರೋಟರ‍್ಯಾಕ್ಟ್ ಅಧ್ಯಕ್ಷೆ ಅಮೀಕ್ಷಾ ವಂದಿಸಿದರು.

Exit mobile version