Kundapra.com ಕುಂದಾಪ್ರ ಡಾಟ್ ಕಾಂ

ಕೇಂದ್ರ ಆದಾಯ ತೆರಿಗೆ ಮೇಲ್ಮನವಿ ಪ್ರಾಧಿಕಾರದ ಸದಸ್ಯರಾಗಿ ಯೋಗೀಶ್ ಕುಮಾರ್ ಯು.ಎಸ್ ನೇಮಕ

ಕುಂದಾಪ್ರ ಡಾಟ್ ಕಾಂ ಸುದ್ದಿ.
ಕುಂದಾಪುರ:
ಕೇಂದ್ರ ಆದಾಯ ತೆರಿಗೆ ಮೇಲ್ಮನವಿ ಪ್ರಾಧಿಕಾರದ (ITAT) ಸದಸ್ಯರಾಗಿ ಉಪ್ಪುಂದದ ಯೋಗೀಶ್ ಕುಮಾರ್ ಯು.ಎಸ್ ಅವರನ್ನು ನೇಮಕ ಮಾಡಲಾಗಿದೆ.

ಕರ್ನಾಟಕ ಉಚ್ಚ ನ್ಯಾಯಾಲಯದಲ್ಲಿ ಕಳೆದ 21 ವರ್ಷಗಳಿಂದ ವಕೀಲರಾಗಿ ಸೇವೆ ಸಲ್ಲಿಸುತ್ತಿರುವ ಯೋಗೀಶ್ ಅವರನ್ನು ಕೇಂದ್ರ ಸರಕಾರದ ಆದಾಯ ತೆರಿಗೆ ಮೇಲ್ಮನವಿ ಪ್ರಾಧಿಕಾರದ ಸದಸ್ಯರನ್ನಾಗಿ ನೇಮಿಸಿ ಆದೇಶಿಸಿರುವ ಬಗ್ಗೆ ಕೇಂದ್ರ ಕಾನೂನು ವ್ಯವಹಾರಗಳ ಇಲಾಖೆ ಅಧೀನ ಕಾರ್ಯದರ್ಶಿ ಸುನೀಲ್ ಸಚ್ಚದೇವ್ ಅವರು ಪತ್ರದಲ್ಲಿ ತಿಳಿಸಿದ್ದು, ಡಿ.31ರಂದು ನಡೆಯುವ ಪರಿಚಯ ಮತ್ತು ತರಬೇತಿ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳುವಂತೆ ಕೋರಲಾಗಿದೆ.

ಯೋಗೀಶ್ ಕುಮಾರ್ ಅವರು ನಿವೃತ್ತ ಮುಖ್ಯೋಪಾಧ್ಯಾಯರಾದ ಉಪ್ಪುಂದ ಸೋಮನಮನೆ ದಿ. ಸೋಮಯ್ಯ ಅವರ ಪುತ್ರರಾಗಿದ್ದು ಪ್ರಸ್ತುತ ಬೆಂಗಳೂರಿನಲ್ಲಿ ವಾಸವಾಗಿದ್ದಾರೆ.

Exit mobile version