Kundapra.com ಕುಂದಾಪ್ರ ಡಾಟ್ ಕಾಂ

ಗಂಗೊಳ್ಳಿ: ಟಾಸ್ಕ್‌ಪೋರ್ಸ್ ಸಮಿತಿ ಸಭೆ

ಕುಂದಾಪ್ರ ಡಾಟ್ ಕಾಂ ಸುದ್ದಿ.
ಗಂಗೊಳ್ಳಿ:
ಗಂಗೊಳ್ಳಿ ಗ್ರಾಮದಲ್ಲಿ ಸುಮಾರು 285 ಮಂದಿ ಈವರೆಗೆ ಕೋವಿಡ್ ಲಸಿಕೆ ಪಡೆದುಕೊಂಡಿಲ್ಲ. ಹಲವಾರು ಬಾರಿ ಇವರ ಮನವೊಲಿಸುವ ಪ್ರಯತ್ನ ನಡೆಸಲಾಗಿದೆ. ಪ್ರತಿಯೊಬ್ಬರಿಗೂ ಕೋವಿಡ್ ಲಸಿಕೆ ನೀಡಬೇಕೆಂಬ ಸರಕಾರ ಮತ್ತು ಜಿಲ್ಲಾಡಳಿತದ ಸೂಚನೆ ಹಿನ್ನಲೆಯಲ್ಲಿ ಕೋವಿಡ್ ಲಸಿಕೆ ಪಡೆದುಕೊಳ್ಳದವರ ಮನೆಗೆ ತೆರಳಿ ಮತ್ತೊಮ್ಮೆ ಅವರ ಮನವೊಲಿಸುವ ಪ್ರಯತ್ನ ಮಾಡಬೇಕು. ಮನೆ ಮನೆಗೆ ತೆರಳಿ ಅವರ ಮನವೊಲಿಸಿ ಲಸಿಕೆ ನೀಡುವ ಕಾರ್ಯ ನಡೆಸಲಾಗುತ್ತಿದೆ ಎಂದು ಗಂಗೊಳ್ಳಿ ಪ್ರಾಥಮಿಕ ಆರೋಗ್ಯ ಕೇಂದ್ರದ ವೈದ್ಯಾಧಿಕಾರಿ ಡಾ.ಅಮಿತಾ ಹೇಳಿದರು.

ಗಂಗೊಳ್ಳಿ ಗ್ರಾಮ ಪಂಚಾಯತ್ ಸಭಾಭವನದಲ್ಲಿ ಬುಧವಾರ ಜರಗಿದ ಗಂಗೊಳ್ಳಿ ಗ್ರಾಮದ ಟಾಸ್ಕ್ಪೋರ್ಸ್ ಸಮಿತಿ ಸಭೆಯಲ್ಲಿ ಅವರು ಮಾಹಿತಿ ನೀಡಿ ಮಾತನಾಡಿದರು.

ವಂಡ್ಸೆ ಹೋಬಳಿ ರೆವಿನ್ಯೂ ಇನ್ಸ್ಪೆಕ್ಟರ್ ರಾಘವೇಂದ್ರ ದೇವಾಡಿಗ ಮಾತನಾಡಿ, ಸರಕಾರದ ಸೂಚನೆಯಂತೆ ಲಸಿಕೆ ಪಡೆಯದೆ ಇರುವ ಜನರ ಮನೆಗೆ ತೆರಳಿ ಅವರ ಮನವೊಲಿಸಿ ಲಸಿಕೆ ನೀಡುವ ಕಾರ್ಯಕ್ರಮ ಆಯೋಜಿಸಲಾಗಿದ್ದು ಇದಕ್ಕೆ ಪ್ರತಿಯೊಬ್ಬರೂ ಸಹಕಾರ ನೀಡಬೇಕು ಎಂದರು.

ಗಂಗೊಳ್ಳಿ ಗ್ರಾಮ ಪಂಚಾಯತ್ ಅಧ್ಯಕ್ಷ ಶ್ರೀನಿವಾಸ ಖಾರ್ವಿ ಅಧ್ಯಕ್ಷತೆ ವಹಿಸಿದ್ದರು. ಉಪಾಧ್ಯಕ್ಷೆ ಪ್ರೇಮಾ ಸಿ.ಪೂಜಾರಿ, ಪಿಡಿಒ ಉಮಾಶಂಕರ, ಗ್ರಾಪಂ ಸದಸ್ಯರು, ಆಶಾ ಮತ್ತು ಅಂಗನವಾಡಿ ಕಾರ್ಯಕರ್ತೆಯರು, ಆರೋಗ್ಯ ಕೇಂದ್ರದ ಸಿಬ್ಬಂದಿಗಳು ಮತ್ತಿತರರು ಉಪಸ್ಥಿತರಿದ್ದರು.

Exit mobile version