Kundapra.com ಕುಂದಾಪ್ರ ಡಾಟ್ ಕಾಂ

ಕುಂದಾಪುರ: ಸರಕಾರಿ ಪದವಿ ಪೂರ್ವ ಕಾಲೇಜಿನಲ್ಲಿ ಕುವೆಂಪು ಜನ್ಮದಿನ ಆಚರಣೆ

ಕುಂದಾಪ್ರ ಡಾಟ್ ಕಾಂ ಸುದ್ದಿ.
ಕುಂದಾಪುರ:
ಇಲ್ಲಿನ ಸರಕಾರಿ ಪದವಿ ಪೂರ್ವ ಕಾಲೇಜಿನಲ್ಲಿ ರಾಷ್ಟ್ರೀಯ ಸೇವಾ ಯೋಜನೆ ಘಟಕದ ವತಿಯಿಂದ ಬುಧವಾರ ಕುವೆಂಪು ಜನ್ಮದಿನ ಆಚರಿಸಲಾಯಿತು. ಈ ಕಾರ್ಯಕ್ರಮದ ಅಂಗವಾಗಿ ಕುವೆಂಪು ಅವರ ಭಾವಚಿತ್ರಕ್ಕೆ ಪುಷ್ಪ ನಮನವನ್ನು ಸಲ್ಲಿಸಿ, ವಿಶ್ವ ಮಾನವ ದಿನದ ಸಂದೇಶವನ್ನು ವಾಚಿಸಲಾಯಿತು.

ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಿದ್ದ ಭುಜಂಗ ಶೆಟ್ಟಿ ಅವರು ಮಾತನಾಡಿ ಕುವೆಂಪು ಅವರು ಮನು ಕುಲಕ್ಕೆ ನೀಡಿದ ಮಾರ್ಗದರ್ಶನ ಮತ್ತು ಆದರ್ಶಗಳು ಸಾರ್ವಕಾಲಿಕವಾದವುಗಳು. ಮನುಜ ಮಥ ವಿಶ್ವ ಪಥ ಸಂದೇಶ ಸಾರಿದ ಶ್ರೇಷ್ಠ ವಿಶ್ವ ಮಾನವ. ಮಾನವೀಯ ಮೌಲ್ಯಗಳು ಎಲ್ಲಕ್ಕಿಂತ ಮಿಗಿಲಾದುದು. ಪ್ರೀತಿಯಿಂದ ಮಾತ್ರ ದ್ವೇಷವನ್ನು ಗೆಲ್ಲಲು ಸಾಧ್ಯ ಎಂದರು.

ಕನ್ನಡ ಉಪನ್ಯಾಸಕರಾದ ಜ್ಯೋತಿ ಶೆಟ್ಟಿ ಯವರು ಕುವೆಂಪು ಅವರ ಕನ್ನಡ ಪ್ರೀತಿ ಮತ್ತು ಅವರ ವೈಚಾರಿಕ ನಿಲುವುಗಳ ಕುರಿತು ಮಾತನಾಡಿದರು. ಆರ್ಕೆಸ್ಟ್ರಾ ಗಾಯಕಿಯೂ ಆಗಿರುವ ವಾಣಿಜ್ಯ ಶಾಸ್ತ್ರ ಉಪನ್ಯಾಸಕಿ ದೀಕ್ಷಾ ಕುವೆಂಪು ಅವರ ಗೀತೆಗಳನ್ನು ಹಾಡಿದರು. ಸಂಸ್ಕ್ರತ ಉಪನ್ಯಾಸಕರಾದ ಸುಲೇಕಾ ಇಂಗ್ಲಿಷ್ ಉಪನ್ಯಾಸಕರಾದ ರಕ್ಷಾ ಶೆಟ್ಟಿ, ಅರ್ಚನಾ ಉಪಸ್ಥಿತರಿದ್ದರು. ಎನ್ ಎಸ್ ಎಸ್ ಸ್ವಯಂ ಸೇವಕರು ಓ ನನ್ನ ಚೇತನ ಹಾಡನ್ನು ಹಾಡಿದರು. ಕಾರ್ಯಕ್ರಮವನ್ನು ಎನ್ ಎಸ್ ಎಸ್ ಕಾರ್ಯಕ್ರಮಾಧಿಕಾರಿ ಸಂಧ್ಯಾ ನಾಯಕ ಆಯೋಜಿಸಿದ್ದರು. ಎನ್ ಎಸ್ ಎಸ್ ಸ್ವಯಂ ಸೇವಕರಾದ ಚೈತ್ರ ಸ್ವಾಗತಿಸಿದರು. ಮಂಜವ್ವ ವಂದಿಸಿದರು.

Exit mobile version