Kundapra.com ಕುಂದಾಪ್ರ ಡಾಟ್ ಕಾಂ

ಕೋಣಿ: ಮೂರೂರು ಶ್ರೀ ಮಹಾಲಿಂಗೇಶ್ವರ ಸಾಂಸ್ಕೃತಿಕ ಸಂಘ ಗೌರವಾಧ್ಯಕ್ಷರಾಗಿ ಸುಬ್ಬಣ್ಣ ಕೋಣಿ ಆಯ್ಕೆ

ಕುಂದಾಪ್ರ ಡಾಟ್ ಕಾಂ ಸುದ್ದಿ.
ಕುಂದಾಪುರ:
ಮೂರೂರು ಶ್ರೀ ಮಹಾಲಿಂಗೇಶ್ವರ ಸಾಂಸ್ಕೃತಿಕ ಸಂಘ ಗೌರವ ಅಧ್ಯಕ್ಷರಾಗಿ ಸುಬ್ಬಣ್ಣ ಕೋಣಿ ಅವರನ್ನು ಆಯ್ಕೆ ಮಾಡಲಾಗಿದೆ.

ಬಸ್ರೂರು ನಿವೇದಿತಾ ಪ್ರೌಢ ಶಾಲೆಯ ಮುಖ್ಯೋಪಾಧ್ಯಾಯರಾಗಿರುವ ಸುಬ್ಬಣ್ಣ ಕೋಣಿ ಅವರು ಉಡುಪಿ ಜಿಲ್ಲಾ ರಾಜ್ಯೋತ್ಸವ, ಉತ್ತಮ ಶಿಕ್ಷಕ ಪ್ರಶಸ್ತಿ ಪುರಸ್ಕೃತರರೂ ಆಗಿದ್ದು ಸಂಘದ ಸ್ಥಾಪಕ ಅಧ್ಯಕ್ಷರಾಗಿ, ಸಲಹೆಗಾರರಾಗಿ ಸೇವೆ ಸಲ್ಲಿಸಿದ್ದಾರೆ.

ಭಾನುವಾರ ನಡೆದ ಸಭೆಯಲ್ಲಿ ಸಂಘದ ಅಧ್ಯಕ್ಷರಾದ ಕೃಷ್ಣಾನಂದ ಶಾನುಭಾಗ್, ಕಾರ್ಯದರ್ಶಿ ವಸಂತ ಎಸ್ ಬಂಗೇರ, ಹಾಗೂ ಪದಾಧಿಕಾರಿಗಳು, ಸದಸ್ಯರು ಉಪಸ್ಥಿತರಿದ್ದರು

Exit mobile version