ಕುಂದಾಪ್ರ ಡಾಟ್ ಕಾಂ ಸುದ್ದಿ.
ಉಡುಪಿ,ಜ.04: ಮೀನುಗಾರಿಕಾ ಇಲಾಖೆಯ ವತಿಯಿಂದ ಪ್ರಸಕ್ತ ಸಾಲಿನಲ್ಲಿ ಪ್ರಧಾನಮಂತ್ರಿ ಮತ್ಸ್ಯಸಂಪದ ಯೋಜನೆಯಡಿ ತಾಜಾ ಮೀನನ್ನು ಮನೆ ಬಾಗಿಲಿಗೆ ತಲುಪಿಸಲು ಸೋಲಾರ್ ಆಧಾರಿತ ಶೈತೀಕೃತ/ ಶೀಥಲೀಕೃತ ತ್ರಿಚಕ್ರ ವಾಹನ ಖರೀದಿಗೆ, ಸಹಾಯಧನ ಪಡೆಯಲು ಅರ್ಜಿ ಆಹ್ವಾನಿಸಲಾಗಿದೆ.
ಅರ್ಜಿ ಸಲ್ಲಿಸಲು ಜ.10 ಕೊನೆಯ ದಿನವಾಗಿದೆ. ಅರ್ಜಿ ನಮೂನೆ ಹಾಗೂ ಹೆಚ್ಚಿನ ಮಾಹಿತಿಗಾಗಿ ಉಡುಪಿ, ಕುಂದಾಪುರ ಹಾಗೂ ಕಾರ್ಕಳ ತಾಲೂಕು ಮೀನುಗಾರಿಕೆ ಸಹಾಯಕ ನಿರ್ದೇಶಕರು ಅಥವಾ ಮೀನುಗಾರಿಕೆ ಉಪನಿರ್ದೇಶಕರ ಕಚೇರಿ, ಉಡುಪಿ ದೂರವಾಣಿ ಸಂಖ್ಯೆ: 0820-2530444 ಅನ್ನು ಸಂಪರ್ಕಿಸುವಂತೆ ಮೀನುಗಾರಿಕೆ ಇಲಾಖೆಯ ಉಪನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.