Kundapra.com ಕುಂದಾಪ್ರ ಡಾಟ್ ಕಾಂ

ಕುಂದಾಪುರದ ಆರ್. ಎನ್.ಶೆಟ್ಟಿ ಪದವಿ ಪೂರ್ವ ಕಾಲೇಜಿನಲ್ಲಿ ಲಸಿಕಾ ಅಭಿಯಾನ

ಕುಂದಾಪ್ರ ಡಾಟ್ ಕಾಂ ಸುದ್ದಿ.
ಕುಂದಾಪುರ:
ಕೇಂದ್ರ ಮತ್ತು ರಾಜ್ಯ ಸರಕಾರಗಳ ಮಹತ್ತರ ಗುರಿಯಾದ 15-18 ವಯೋಮಾನದವರಿಗೆ ಕನಿಷ್ಠ ಅವಧಿಯಲ್ಲಿ ಗರಿಷ್ಠ ಪ್ರಮಾಣದ ಲಸಿಕೆ ನೀಡುವಿಕೆ, ಆ ಮೂಲಕ ಕೋವಿಡ್ ಮತ್ತು ಓಮಿಕ್ರಾನ್ ಸಾಂಕ್ರಾಮಿಕಗಳ ತಡೆಯಲ್ಲಿ ರಕ್ಷಾಕವಚವಾಗುವ ವ್ಯಾಕ್ಸಿನೇಶನ್ ಅಭಿಯಾನದ ಅಂಗವಾಗಿ ಕುಂದಾಪುರದ ಆರ್. ಎನ್. ಶೆಟ್ಟಿ ಪದವಿ ಪೂರ್ವ ಕಾಲೇಜಿನಲ್ಲಿ ಕೋವಾಕ್ಸಿನ್ ಲಸಿಕಾ ವಿತರಣಾ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಯಿತು.

ಲಯನ್ಸ್ ಕ್ಲಬ್, ಕುಂದಾಪುರ, ಇದರ ಅಧ್ಯಕ್ಷರಾದ ಲಯನ್ ರಾಧಾಕೃಷ್ಣ ನಾಯಕ್ ರವರು ಕಾಲೇಜಿನ ಲಸಿಕಾ ಅಭಿಯಾನಕ್ಕೆ ದೀಪ ಬೆಳಗುವುದರ ಮೂಲಕ ವಿಧ್ಯುಕ್ತ ಚಾಲನೆ ನೀಡಿದರು.

ತಾಲೂಕು ಸಾರ್ವಜನಿಕ ಉಪವಿಭಾಗೀಯ ಆಸ್ಪತ್ರೆ, ಕುಂದಾಪುರ, ಇಲ್ಲಿಯ ವೈದ್ಯಾಧಿಕಾರಿ ಡಾ. ಕವಿತಾ ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದರು. ಕಾಲೇಜಿನ ಪ್ರಾಂಶುಪಾಲರಾದ ನವೀನ ಕುಮಾರ ಶೆಟ್ಟಿಸಮಾರಂಭದ ಅಧ್ಯಕ್ಷತೆ ವಹಿಸಿದ್ದರು. ಕನ್ನಡ ವಿಭಾಗ ಮುಖ್ಯಸ್ಥರಾದ ಕೃಷ್ಣಮೂರ್ತಿ ಡಿ. ಬಿ ಯವರು ಧನ್ಯವಾದ ಸಲ್ಲಿಸಿದರು. ಹಿಂದಿ ವಿಭಾಗ ಮುಖ್ಯಸ್ಥೆ ಜಯಶೀಲಾ ಪೈಯವರು ಕಾರ್ಯಕ್ರಮ ನಿರೂಪಿಸಿದರು.

Exit mobile version