ಕುಂದಾಪ್ರ ಡಾಟ್ ಕಾಂ ಸುದ್ದಿ.
ಗಂಗೊಳ್ಳಿ: ಗಂಗೊಳ್ಳಿಯ ಜಿ.ಎಸ್.ವಿ.ಎಸ್. ಅಸೋಸಿಯೇಶನ್ ವತಿಯಿಂದ ಗಂಗೊಳ್ಳಿಯ ಸ.ವಿ. ಪದವಿಪೂರ್ವ ಕಾಲೇಜಿನ ಸಭಾಂಗಣದಲ್ಲಿ ಜರಗಿದ ವಿದ್ಯಾರ್ಥಿವೇತನ ವಿತರಣಾ ಸಮಾರಂಭದಲ್ಲಿ ಕುಂಭಾಶಿಯ ಶ್ರೀ ಚಂಡಿಕಾ ದುರ್ಗಾಪರಮೇಶ್ವರಿ ದೇವಸ್ಥಾನದ ಆಡಳಿತ ಧರ್ಮದರ್ಶಿ ಹೊಸ್ಮನೆ ದೇವರಾಯ ಶೇರುಗಾರ್ ಅವರನ್ನು ಸನ್ಮಾನಿಸಿ ಗೌರವಿಸಲಾಯಿತು.
ಗಂಗೊಳ್ಳಿಯ ಜಿಎಸ್‌ವಿಎಸ್ ಅಸೋಸಿಯೇಶನ್ ಅಧ್ಯಕ್ಷ ಡಾ.ಕಾಶೀನಾಥ ಪೈ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು. ಜಿಎಸ್‌ವಿಎಸ್ ಅಸೋಸಿಯೇಶನ್ ಕಾರ್ಯದರ್ಶಿ ಎಚ್.ಗಣೇಶ ಕಾಮತ್, ಕಾಲೇಜಿನ ಸಂಚಾಲಕ ಎನ್.ಸದಾಶಿವ ನಾಯಕ್, ಪ್ರಾಂಶುಪಾಲೆ ಕವಿತಾ ಎಂ.ಸಿ. ಉಪಸ್ಥಿತರಿದ್ದರು. ಶಾಲಾ ಆಡಳಿತ ಮಂಡಳಿ ಸದಸ್ಯರು, ಉಪನ್ಯಾಸಕರು, ಪೋಷಕರು, ವಿದ್ಯಾರ್ಥಿಗಳು, ಮೊದಲಾದವರು ಉಪಸ್ಥಿತರಿದ್ದರು.