Site icon Kundapra.com ಕುಂದಾಪ್ರ ಡಾಟ್ ಕಾಂ

ಕೊಲ್ಲೂರು: ಬಸ್‌ ಪಲ್ಟಿಯಾಗಿ 20ಕ್ಕೂ ಅಧಿಕ ಮಂದಿಗೆ ಗಾಯ

ಕುಂದಾಪ್ರ ಡಾಟ್ ಕಾಂ ಸುದ್ದಿ.
ಕೊಲ್ಲೂರು:
ಕೊಲ್ಲೂರು ದೇವಸ್ಥಾನಕ್ಕೆ ಪ್ರಯಾಣಿಸುತ್ತಿದ್ದ ಯಾತ್ರಾರ್ಥಿಗಳ ಬಸ್‌ ಪಲ್ಟಿಯಾಗಿ ಬಸ್ಸಿನಲ್ಲಿದ್ದ ಸುಮಾರು 20 ಮಂದಿ ಗಂಭೀರವಾಗಿ ಗಾಯಗೊಂಡಿರುವ ಘಟನೆ ಕೊಲ್ಲೂರು ಬಳಿಯ ಓಣ್ಕಣ್‌ ಮೋರಿ ತಿರುವಿನಲ್ಲಿ ನಡೆದಿದೆ.

ಕೋಲಾರದಿಂದ ಭಕ್ತರು ಕೊಲ್ಲೂರು ಶ್ರೀ ಮೂಕಾಂಬಿಕಾ ದೇವಸ್ಥಾನಕ್ಕೆ ಆಗಮಿಸುತ್ತಿದ್ದ ವೇಳೆಯಲ್ಲಿ ಈ ದುರ್ಘಟನೆ ಸಂಭವಿಸಿದೆ. ವೇಗವಾಗಿ ಚಲಿಸುತ್ತಿದ್ದ ಬಸ್‌ ತಿರುವಿನಲ್ಲಿ ಚಾಲಕನ ನಿಯಂತ್ರಣ ತಪ್ಪಿ ಈ ದುರ್ಘಟನೆ ಸಂಭವಿಸಿದೆ. ಬಸ್ಸಿನಲ್ಲಿ ಪ್ರಯಾಣಿಸುತ್ತಿದ್ದ ಸುಮಾರು 20 ಮಂದಿ ಗಂಭೀರವಾಗಿ ಗಾಯಗೊಂಡಿದ್ದಾರೆ. ಗಾಯಾಳುಗಳನ್ನು ಆಸ್ಪತ್ರೆಗೆ ದಾಖಲು ಮಾಡಿ ಚಿಕಿತ್ಸೆಯನ್ನು ನೀಡಲಾಗುತ್ತಿದೆ. ಚಾಲಕನ ನಿರ್ಲಕ್ಷ್ಯದಿಂದ ದುರ್ಘಟನೆ ಸಂಭವಿಸಿದೆ ಎನ್ನಲಾಗುತ್ತಿದೆ. ಕೊಲ್ಲೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Exit mobile version