Kundapra.com ಕುಂದಾಪ್ರ ಡಾಟ್ ಕಾಂ

ಜಿಲ್ಲಾ ಮಟ್ಟದ  ಬಾಲ್ ಬ್ಯಾಡ್ಮಿಂಟನ್ ಪಂದ್ಯಾಟ ಉದ್ಘಾಟನೆ

ಗಂಗೊಳ್ಳಿ: ಕ್ರೀಡೆಯು ಮನುಷ್ಯನ ದೈಹಿಕ ಹಾಗೂ ಮಾನಸಿಕ ಬೆಳವಣಿಗೆಗೆ ಸಹಕಾರಿಯಾಗಿದೆ. ವಿದ್ಯಾರ್ಥಿಗಳು ಪಾಠೇತರ ಚಟುವಟಿಕೆಗಳಲ್ಲಿ ತೊಡಗಿಸಿಕೊಳ್ಳುವುದು ಅವಶ್ಯಕವಾಗಿದ್ದು, ಶಾಲೆಗಳಲ್ಲಿ ವಿದ್ಯಾರ್ಥಿಗಳಿಗೆ ಈ ದಿಸೆಯಲ್ಲಿ ಹೆಚ್ಚಿನ ಪ್ರೋತ್ಸಾಹ ಸಹಕಾರ ನೀಡಬೇಕಾಗಿದೆ. ಕ್ರೀಡೆಗಳನ್ನು ಕ್ರೀಡಾಸ್ಪೂರ್ತಿಯಿಂದ ತೆಗೆದುಕೊಂಡು ಕ್ರೀಡೆಗಳಲ್ಲಿ ಭಾಗವಹಿಸಿದಾಗ ಕ್ರೀಡೆಯ ನಿಜವಾಗ ಪ್ರಯೋಜನ ಪಡೆಯಲು ಸಾಧ್ಯವಾಗುತ್ತದೆ ಎಂದು ಜಿಲ್ಲಾ ಪಂಚಾಯತ್ ಸದಸ್ಯ ಅನಂತ ಮೊವಾಡಿ ಅಭಿಪ್ರಾಯಪಟ್ಟರು.

ಅವರು ಇತ್ತೀಚಿಗೆ ಉಡುಪಿ ಜಿಲ್ಲಾ ಪಂಚಾಯತ್ ಉಡುಪಿ, ಸಾರ್ವಜನಿಕ ಶಿಕ್ಷಣ ಇಲಾಖೆ ಉಡುಪಿ, ಕ್ಷೇತ್ರ ಶಿಕ್ಷಣಾಧಿಕಾರಿಯವರ ಕಛೇರಿ ಕುಂದಾಪುರ ಹಾಗೂ ಸರಸ್ವತಿ ವಿದ್ಯಾಲಯ ಆಂಗ್ಲ ಮಾಧ್ಯಮ ಶಾಲೆ ಗಂಗೊಳ್ಳಿ ಇವರ ಜಂಟಿ ಆಶ್ರಯದಲ್ಲಿ ಗಂಗೊಳ್ಳಿಯ ಶ್ರೀ ರಾಘವೇಂದ್ರ ಸ್ಪೋರ್ಟ್ಸ್ ಕ್ಲಬ್ ಸಹಕಾರದೊಂದಿಗೆ ಗಂಗೊಳ್ಳಿಯ ಸರಸ್ವತಿ ವಿದ್ಯಾಲಯ ಪದವಿಪೂರ್ವ ಕಾಲೇಜಿನ ಕ್ರೀಡಾಂಗಣದಲ್ಲಿ ಆಯೋಜಿಸಲಾಗಿದ್ದ ಉಡುಪಿ ಜಿಲ್ಲಾ ಮಟ್ಟದ ಪ್ರೌಢಶಾಲಾ ವಿಭಾಗದ ಬಾಲಕರ ಮತ್ತು ಬಾಲಕಿಯರ ಬಾಲ್ ಬ್ಯಾಡ್ಮಿಂಟನ್ ಪಂದ್ಯಾಟವನ್ನು ಉದ್ಘಾಟಿಸಿ ಮಾತನಾಡಿದರು.

ಗಂಗೊಳ್ಳಿಯ ಜಿಎಸ್‌ವಿಎಸ್ ಅಸೋಸಿಯೇಶನ್ ಅಧ್ಯಕ್ಷ ಡಾ.ಕಾಶೀನಾಥ ಪೈ ಅಧ್ಯಕ್ಷತೆ ವಹಿಸಿದ್ದರು. ಜಿಎಸ್‌ವಿಎಸ್ ಅಸೋಸಿಯೇಶನ್ ಕಾರ್ಯದರ್ಶಿ ಎಚ್.ಗಣೇಶ ಕಾಮತ್, ಶಾಲೆಯ ಸಂಚಾಲಕ ಎನ್.ಸದಾಶಿವ ನಾಯಕ್, ಜಿಲ್ಲಾ ದೈಹಿಕ ಶಿಕ್ಷಣಾಧಿಕಾರಿ ಎಸ್.ಮಧುಕರ, ಕುಂದಾಪುರ ದೈಹಿಕ ಶಿಕ್ಷಣ ಪರಿವೀಕ್ಷಣಾಧಿಕಾರಿ ದತ್ತಾತ್ರೇಯ ನಾಯಕ್, ಉಡುಪಿ ದೈಹಿಕ ಶಿಕ್ಷಣ ಪರಿವೀಕ್ಷಣಾಧಿಕಾರಿ ಬಸವರಾಜ್, ಬೈಂದೂರು ದೈಹಿಕ ಶಿಕ್ಷಣ ಪರಿವೀಕ್ಷಣಾಧಿಕಾರಿ ರಾಜು ಪೂಜಾರಿ, ಕಾರ್ಕಳ ದೈಹಿಕ ಶಿಕ್ಷಣ ಪರಿವೀಕ್ಷಣಾಧಿಕಾರಿ ಬಾಬು ಪೂಜಾರಿ, ಗಂಗೊಳ್ಳಿ ಕ್ಲಸ್ಟರ್‌ನ ಸಿಆರ್‌ಪಿ ತಿಲೋತ್ತಮ, ಸೀತಾರಾಮ ಶೆಟ್ಟಿ ಕಳತ್ತೂರು, ಸದಾಶಿವ ಶೆಟ್ಟಿ, ಶ್ರೀ ರಾಘವೇಂದ್ರ ಸ್ಪೋರ್ಟ್ಸ್ ಕ್ಲಬ್‌ನ ಅಧ್ಯಕ್ಷ ಎಂ.ಜಿ.ರಾಘವೇಂದ್ರ ಭಂಡಾರ್‌ಕಾರ್, ಸರಸ್ವತಿ ವಿದ್ಯಾಲಯ ಪದವಿಪೂರ್ವ ಕಾಲೇಜಿನ ಪ್ರಾಂಶುಪಾಲ ಆರ್.ಎನ್. ರೇವಣ್‌ಕರ್, ಪ್ರೌಢಶಾಲಾ ವಿಭಾಗದ ಉಪಪ್ರಾಂಶುಪಾಲ ವಾಮನದಾಸ ಭಟ್ ಮೊದಲಾದವರು ಉಪಸ್ಥಿತರಿದ್ದರು.

ಸರಸ್ವತಿ ವಿದ್ಯಾಲಯ ಆಂಗ್ಲ ಮಾಧ್ಯಮ ಶಾಲೆಯ ಮುಖ್ಯಶಿಕ್ಷಕ ರಾಘವೇಂದ್ರ ಶೇರುಗಾರ್ ಸ್ವಾಗತಿಸಿ, ದೈಹಿಕ ಶಿಕ್ಷಣ ಶಿಕ್ಷಕ ರತ್ನಾಕರ ಶೆಟ್ಟಿ ಕಾರ್ಯಕ್ರಮ ನಿರೂಪಿಸಿದರು. ಸಹಶಿಕ್ಷಕಿ ಸುಜಾತಾ ವಂದಿಸಿದರು.

Exit mobile version