Site icon Kundapra.com ಕುಂದಾಪ್ರ ಡಾಟ್ ಕಾಂ

ಕೊಡೇರಿ ಕಿರುಬಂದರು ಅಭಿವೃದ್ಧಿ ಕಾಮಗಾರಿ ವಿಳಂಬ: ಉಪ್ಪುಂದ ರಾಣಿಬಲೆ ಮೀನುಗಾರರ ಒಕ್ಕೂಟದಿಂದ ತಹಶಿಲ್ದಾರ್‌ಗೆ ಮನವಿ

ಕುಂದಾಪ್ರ ಡಾಟ್ ಕಾಂ ಸುದ್ದಿ.
ಬೈಂದೂರು:
ತಾಲೂಕಿನ ಕೊಡೇರಿ ಕಿರುಬಂದರು ಅಭಿವೃದ್ಧಿ ಕಾಮಗಾರಿಗಳನ್ನು ನಡೆಸಲು ಅಧಿಕಾರಿಗಳು ವಿಳಂಬ ಧೋರಣೆ ಹಾಗೂ ಉಪ್ಪುಂದ, ಪಡುವರಿ ಗ್ರಾಮದ ಮೀನುಗಾರರ ಬೇಡಿಕೆಯ ಬಗ್ಗೆ ನಿರ್ಲಕ್ಷ ವಹಿಸಿರುವುದನ್ನು ಖಂಡಿಸಿ ಸೋಮವಾರ ಉಪ್ಪುಂದ ರಾಣಿಬಲೆ ಮೀನುಗಾರರ ಒಕ್ಕೂಟ ರಿ ವತಿಯಿಂದ ಬೈಂದೂರು ತಹಶೀಲ್ದಾರ್ ಶೋಭಾಲಕ್ಷ್ಮೀ ಎಚ್. ಎಸ್ ಅವರಿಗೆ ಮನವಿ ಸಲ್ಲಿಸಲಾಯಿತು.

ಉಪ್ಪುಂದ ರಾಣಿಬಲೆ ಮೀನುಗಾರರ ಒಕ್ಕೂಟ ರಿ. ಅಧ್ಯಕ್ಷ ವೆಂಟಕರಮಣ ಖಾರ್ವಿ ಮಾತನಾಡಿ ನಾವು ಸಾಂಕೇತಿಕವಾಗಿ ಸರ್ಕಾರದ ಕೋವಿಡ್ ನಿಯಮಾವಳಿಯ ಉದ್ದೇಶದಿಂದ ನಾವು ಇಂದು ಸಾಂಕೇತಿಕವಾಗಿ ಬೈಂದೂರು ತಹಶೀಲ್ದಾರ್‌ಗೆ ಮನವಿ ನೀಡಿದ್ದೇವೆ. ಒಂದು ವೇಳೆ ಕಾಮಗಾರಿಗಳು ಪ್ರಾರಂಭವಾಗದಿದ್ದರೆ ಕೋವಿಡ್ ನಿಯಮಾವಳಿಗಳು ಸಡಿಲಗೊಂಡ ನಂತರ ನಮ್ಮ ಹಕ್ಕನ್ನು ಕೇಳುವ ಸಲುವಾಗಿ ೫ ಸಾವಿರ ಜನ ಸೇರಿ ಬೈಂದೂರು ತಹಶೀಲ್ದಾರ್ ಕಛೇರಿಯ ಮುಂದಭಾಗದಲ್ಲಿ ಬೃಹತ್ ಪ್ರತಿಭಟನೆ ಮಾಡುತ್ತೇವೆ ಎಂದರು.

ತಹಶೀಲ್ದಾರ್ ಶೋಭಾಲಕ್ಷ್ಮೀ ಎಚ್.ಎಸ್ ಅವರು ಮನವಿ ಸ್ವೀಕರಿಸಿ ಮಾತನಾಡಿ, ಈ ಮನವಿಯನ್ನು ಸ್ವೀಕರಿಸಿ, ನನ್ನ ಮೇಲಾಧಿಕಾರಿಗಳಿಗೆ ತಿಳಿಸುತ್ತೇನೆ ಎಂದರು.

ಈ ಸಂದರ್ಭದಲ್ಲಿ ಉಪ್ಪುಂದ ರಾಣಿಬಲೆ ಮೀನುಗಾರರ ಒಕ್ಕೂಟದ ಕಾರ್ಯದರ್ಶಿ ಡಿ ಸುರೇಶ್ ಖಾರ್ವಿ ಹಾಗೂ ಒಕ್ಕೂಟದ ಪದಾಧಿಕಾರಿಗಳು ಹಾಗೂ ರಾಣಿಬಲೆಯ ಸದಸ್ಯರು ಇದ್ದರು.

Exit mobile version