ಕುಂದಾಪ್ರ ಡಾಟ್ ಕಾಂ ಸುದ್ದಿ.
ಬೈಂದೂರು: ನಮ್ಮ ದೇಶ ಹಲವು ಭಾಷಾ ಸಂಸ್ಕ್ರತಿಯ ತವರೂರಾಗಿದೆ. ಈ ದೇಶದ ಸಂವಿಧಾನ ಜಾಗತಿಕ ಮಟ್ಟದಲ್ಲಿ ಗೌರವ ಪಡೆದುಕೊಂಡ ಹೆಗ್ಗಳಿಕೆ ಹೊಂದಿದ್ದು. ಪರಸ್ಪರ ಐಕ್ಯತೆ ಮೂಲಕ ಭವ್ಯ ಭಾರತ ನಿರ್ಮಿಸಲು ಪ್ರತಿಯೊಬ್ಬರು ಕಟಿಬದ್ದರಾಗಬೇಕಾಗಿದೆ ಎಂದು ಬೈಂದೂರು ತಹಶೀಲ್ದಾರ ಶೋಭಾಲಕ್ಷ್ಮೀ ಎಚ್. ಎಸ್. ಹೇಳಿದರು.
ಇಲ್ಲಿನ ತಾಲೂಕು ಆಡಳಿತ ಕಛೇರಿ ವತಿಯಿಂದ ಬುಧವಾರ ಬೈಂದೂರು ಗಾಂಧಿ ಮೈದಾನದಲ್ಲಿ ಹಮ್ಮಿಕೊಂಡ 73ನೇ ಗಣರಾಜ್ಯೋತ್ಸವ ದಿನಾಚರಣೆಯಲ್ಲಿ ಅವರು ದ್ವಜಾರೋಹಣ ನೆರವೇರಿಸಿ ಬಳಿಕ ಸಂವಿದಾನ ಶಿಲ್ಪಿ ಡಾ. ಬಿ.ಆರ್ ಅಂಬೇಡ್ಕರ್ ಭಾವಚಿತ್ರಕ್ಕೆ ಪುಷ್ಪನಮನ ಸಲ್ಲಿಸಿ ಮಾತನಾಡಿದರು.
ಉಪತಹಶೀಲ್ದಾರ ಭೀಮಪ್ಪ, ಬೈಂದೂರು ಕ್ಷೇತ್ರ ಶಿಕ್ಷಣಾಧಿಕಾರಿ ಜಿ. ಎಂ. ಮುಂದಿನಮನಿ, ಕ್ಷೇತ್ರ ಸಮನ್ವಯಾಧಿಕಾರಿ ಅಬ್ದುಲ್ ರವೂಫ್, ಬೈಂದೂರು ವೃತ್ತ ನಿರೀಕ್ಷಕ ಸಂತೋಷ್ ಆನಂದ್ ಕಾಯ್ಕಿಣಿ, ಬೈಂದೂರು ಪಟ್ಟಣ ಪಂಚಾಯತ್ ಮುಖ್ಯಾಧಿಕಾರಿ ನವೀನ್ ಕುಮಾರ್, ಬೈಂದೂರು ಠಾಣಾಧಿಕಾರಿ ಪವನ್ ನಾಯಕ್, ಯಡ್ತರೆ ಗ್ರಾಮ ಲೆಕ್ಕಾಧಿಕಾರಿ ಮಂಜುನಾಥ ಬಿಲ್ಲವ, ಪ್ರಭಾಕರ ಟೀಚರ್, ಗ್ರಾಮ ಲೆಕ್ಕಾಧಿಕಾರಿಗಳು, ಶಿಕ್ಷಣ ಇಲಾಖೆಯ ಅಧಿಕಾರಿಗಳು, ಪೊಲೀಸ್ ಇಲಾಖೆ ಹಾಗೂ ಕಂದಾಯ ಇಲಾಖೆಯ ಸಿಬ್ಬಂದಿಗಳು ಉಪಸ್ಥಿತರಿದ್ದರು. ಬೈಂದೂರು ವೃತ್ತ ನಿರೀಕ್ಷಕ ಸಂತೋಷ ಕಾಯ್ಕಿಣಿ ನೇತ್ರತ್ವದಲ್ಲಿ ಪಧ ಸಂಚಲನ ನಡೆಯಿತು.