Kundapra.com ಕುಂದಾಪ್ರ ಡಾಟ್ ಕಾಂ

ಬೈಂದೂರು ಬ್ಲಾಕ್ ಕಾಂಗ್ರೆಸ್ ಹಿಂದುಳಿದ ವರ್ಗಗಳ ಘಟಕದ ಪದಾಧಿಕಾರಿಗಳ ಪದಪ್ರದಾನ

 ಕುಂದಾಪ್ರ ಡಾಟ್ ಕಾಂ ಸುದ್ದಿ.

ಬೈಂದೂರು: ಬ್ಲಾಕ್ ಕಾಂಗ್ರೆಸ್ ಹಿಂದುಳಿದ ವರ್ಗಗಳ ಘಟಕದ ಪದಾಧಿಕಾರಿಗಳ ಪದಪ್ರದಾನ ಸಮಾರಂಭ ಬುಧವಾರ ಬೈಂದೂರು ಕಾಂಗ್ರೆಸ್ ಕಛೇರಿಯಲ್ಲಿ ಜರುಗಿತು. 

ಮಾಜಿ ಶಾಸಕ ಗೋಪಾಲ ಪೂಜಾರಿ ಅವರು ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿ, ಹಿಂದುಳಿದ ವರ್ಗಕ್ಕೆ ಕಾಂಗ್ರೆಸ್ ಪಕ್ಷದ ಕೊಡುಗೆ ಅನನ್ಯವಾದುದು, ಹಿಂದುಳಿದ ವರ್ಗಗಳ ಮುಖ್ಯಮಂತ್ರಿಗಳನ್ನು ಕರ್ನಾಟಕಕ್ಕೆ ನೀಡಿದ ಪಕ್ಷ ನಮ್ಮದು, ಹಿಂದುಳಿದ ವರ್ಗಗಳು ನಮ್ಮ ಪಕ್ಷದ ಆಸ್ತಿ ಎಂದರು. 

ಸಭೆಯ ಅಧ್ಯಕ್ಷತೆಯನ್ನು ಹಿಂದುಳಿದ ವರ್ಗಗಳ ಅಧ್ಯಕ್ಷ ಎಸ್. ಮಣಿಕಂಠ ವಹಿಸಿದ್ದರು. ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರಾದ ಮದನ್ ಕುಮಾರ್, ನಗರ ಕಾಂಗ್ರೆಸ್ ಅಧ್ಯಕ್ಷ ನಾಗರಾಜ ಗಾಣಿಗ, ಬ್ಲಾಕ್ ಕಾರ್ಯದರ್ಶಿ ಜಗದೀಶ್ ದೇವಾಡಿಗ, ಅರವಿಂದ ಪೂಜಾರಿ, ಹಿಂದುಳಿದ ವರ್ಗಗಳ ರಾಜ್ಯ ಘಟಕದ ಸುಬ್ರಹ್ಮಣ್ಯ ಪೂಜಾರಿ, ಜಿಲ್ಲಾ ಘಟಕದ ರಾಮಚಂದ್ರ ಖಾರ್ವಿ, ಮೋಹನ್ ಪೂಜಾರಿ , ಮಹಿಳಾ ಕಾಂಗ್ರೆಸ್ ಅಧ್ಯಕ್ಷೆ ಗೌರಿ ದೇವಾಡಿಗ ಹಾಗೂ ಹಿಂದುಳಿದ ವರ್ಗಗಳ ಪದಾಧಿಕಾರಿಗಳು ಮತ್ತು ಸದಸ್ಯರು  ಉಪಸ್ಥಿತರಿದ್ದರು. ಗಣೇಶ ಪೂಜಾರಿ ಅವರು ಸ್ವಾಗತಿಸಿ, ವಂದಿಸಿದರು.

Exit mobile version