Kundapra.com ಕುಂದಾಪ್ರ ಡಾಟ್ ಕಾಂ

ಕೋಟೇಶ್ವರ: ನೂತನ ಧ್ವಜಸ್ಥಂಭ ಪ್ರತಿಷ್ಠಾಪನೆ, ಬ್ರಹ್ಮಕಲಶೋತ್ಸವ ಆಮಂತ್ರಣ ಬಿಡುಗಡೆ

ಕುಂದಾಪ್ರ ಡಾಟ್ ಕಾಂ ಸುದ್ದಿ.
ಕುಂದಾಪುರ:
ಭಗವಂತನ ಸೇವೆಯಿಂದ ಪುಣ್ಯ ಪ್ರಾಪ್ತಿಯಾಗುತ್ತದೆ. ಇತಂಹ ಅತಿ ಶ್ರೇಷ್ಠವಾದ ಈ ಬ್ರಹ್ಮಕಲಶೋತ್ಸವ ಸೇವೆ ಮಾಡಲು ಸಿಕ್ಕಿರುವುದು ನಮ್ಮೆಲ್ಲರ ಸೌಭಾಗ್ಯವಾಗಿದೆ. ಇತಂಹ ಅವಕಾಶ ಸಿಗುವುದು ಕೆಲವು ಭಕ್ತರಿಗೆ ಮಾತ್ರ. ಅಪಾಯದಂಚಿನಲ್ಲಿದ್ದ ಧ್ವಜಮರವನ್ನು ಭಕ್ತರೆಲ್ಲರ ಏಕತೆಯಿಂದ ನೂತನವಾಗಿ ಪ್ರತಿಷ್ಠಾಪಿಸುವ ಕೆಲಸದೊಂದಿಗೆ ಒಗ್ಗಟ್ಟಿನಿಂದ ದೇವರ ಸೇವೆ ಮಾಡೋಣಾ ಎಂದು ಸಮಾಜ ಸೇವಕ ಮಲ್ಯಾಡಿ ಶಿವರಾಮ ಶೆಟ್ಟಿ ಹೇಳಿದರು.

ಕೋಟೇಶ್ವರ ಮಹತೋಬಾರ ಶ್ರೀ ಕೋಟಿಲಿಂಗೇಶ್ವರ ದೇವಸ್ಥಾನದ ಸಭಾಭವನದಲ್ಲಿ ಸೋಮವಾರ ಸಂಜೆ ಜರುಗಿದ ದೇವಳದ ನೂತನ ಧ್ವಜಸ್ಥಂಭ ಪ್ರತಿಷ್ಠಾಪನೆ, ಬ್ರಹ್ಮಕಲಶೋತ್ಸವ ಹಾಗೂ ಬ್ರಹ್ಮರಥೋತ್ಸವ ಕಾರ‍್ಯಕ್ರಮದ ಆಮಂತ್ರಣ ಪತ್ರಿಕೆ ಬಿಡುಗಡೆಗೊಳಿಸಿ ಮಾತನಾಡಿದರು.

ಬ್ರಹ್ಮಕಲಶೋತ್ಸವ ಸಮಿತಿ ಅಧ್ಯಕ್ಷ ಗೋಪಾಡಿ ಶ್ರೀನಿವಾಸ ರಾವ್ ಮಾತನಾಡಿ, 68 ವರ್ಷಗಳ ನಂತರ ಈ ಒಂದು ಬ್ರಹ್ಮಕಲಶೋತ್ಸವ ಮಾಡುವ ಸೌಭಾಗ್ಯ ಸಿಕ್ಕಿರುವುದು ನಮ್ಮಲ್ಲರ ಭಾಗ್ಯ. ಈ ಸೇವೆ ಮಾಡಲು ಪ್ರತಿಯೊಬ್ಬರಿಗೂ ಭಗವಂತ ಅವಕಾಶ ನೀಡಿದ್ದಾನೆ. ಕೋವಿಡ್ ಕಾರಣಗಳಿಂದ 2 ವರ್ಷಗಳಿಂದ ಮುಂದೂಡಲ್ಪಟ್ಟ ಈ ಕಾರ‍್ಯಕ್ರಮ ಈ ಬಾರಿ ಅತಿ ಶ್ರದ್ಧೆ ಮತ್ತು ಭಕ್ತಿಯಿಂದ ನಡೆಯಲಿದ್ದು ಸರ್ವ ಭಕ್ತರು ತಮ್ಮ ಸಹಕಾರ ನೀಡಿ ನಮ್ಮೊಂದಿಗೆ ಕೈಜೋಡಿಸಬೇಕೆಂದರು.

ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ಪ್ರಭಾಕರ್ ಶೆಟ್ಟಿ ಅಧ್ಯಕ್ಷತೆ ವಹಿಸಿದ್ದರು. ದೇವಳದ ಪ್ರಧಾನ ತಂತ್ರಿ ಪ್ರಸ್ನನ ಕುಮಾರ್ ಐತಾಳ್, ಬ್ರಹ್ಮಕಲಶೋತ್ಸವ ಸಮಿತಿ ಗೌರವಧ್ಯಕ್ಷ ಗೋಪಾಲ ಕೃಷ್ಣ ಶೆಟ್ಟಿ ಮಾರ್ಕೋಡು, ಜೀರ್ಣೋದ್ಧಾರ ಸಮಿತಿ ಅಧ್ಯಕ್ಷ ಕೋಣಿ ಕೃಷ್ಣದೇವ ಕಾರಂತ್, ಬ್ರಹ್ಮಕಲಶೋತ್ಸವ ಸಮಿತಿ ಕಾರ‍್ಯದರ್ಶಿ ಸುರೇಶ್ ಬೆಟ್ಟಿನ್, ದೇವಳದ ಕಾರ‍್ಯನಿರ್ವಹಾಣಾಧಿಕಾರಿ ಗಣೇಶ್ ಗೌಡ, ಸ್ವಾಗತ ಸಮಿತಿ ಸದಸ್ಯರು, ವ್ಯವಸ್ಥಾಪನಾ ಸಮಿತಿ ಸದಸ್ಯರು, ಜೀರ್ಣೋದ್ಧಾರ ಸಮಿತಿ ಸದಸ್ಯರು, ಬ್ರಹ್ಮಕಲಶೋತ್ಸವ ಸಮಿತಿ, ಉಪಸಮಿತಿ ಸದಸ್ಯರು, ಸದ್ಭಕ್ತರು ಉಪಸ್ಥಿತರಿದ್ದರು. ಜೀರ್ಣೋದ್ಧಾರ ಸಮಿತಿ ಸದಸ್ಯ ಪ್ರಭಾಕರ್ ಬಿ ಕುಂಭಾಸಿ ಕಾರ‍್ಯಕ್ರಮ ನಿರೂಪಿಸಿದರು. ಕಾರ‍್ಯನಿರ್ವಹಾಣಾಧಿಕಾರಿ ಗಣೇಶ್ ಗೌಡ ವಂದಿಸಿದರು.

Exit mobile version