Site icon Kundapra.com ಕುಂದಾಪ್ರ ಡಾಟ್ ಕಾಂ

ಮೇಕೋಡು: ಉಚಿತ ನೇತ್ರ ತಪಾಸಣೆ, ಶಸ್ತ್ರಚಿಕಿತ್ಸಾ ಮತ್ತು ಮಧುಮೇಹ ತಪಾಸಣಾ ಶಿಬಿರ

ಕುಂದಾಪ್ರ ಡಾಟ್ ಕಾಂ ಸುದ್ದಿ.
ಬೈಂದೂರು:
ಗ್ರಾಮೀಣ ಭಾಗದ ಜನರಿಗೆ ಕಣ್ಣಿನ ಆರೋಗ್ಯದ ಬಗ್ಗೆ ವಿಶೇಷ ಕಾಳಜಿವಹಿಸಿ ಇಂತಹ ಉಚಿತ ಶಿಬಿರಗಳನ್ನು ಆಯೋಜಿಸುತ್ತಿರುವು ಅತ್ಯಂತ ಶ್ಲಾಘನೀಯ ಎಂದು ಖಂಬದಕೋಣೆ ರೈತರ ಸೇವಾ ಸಹಕಾರಿ ಸಂಘದ ಅಧ್ಯಕ್ಷ ಎಸ್. ಪ್ರಕಾಶ್ಚಂದ್ರ ಶೆಟ್ಟಿ ಹೇಳಿದರು.

ಬೈಂದೂರು ರೋಟರಿ ಕ್ಲಬ್ ನೇತೃತ್ವದಲ್ಲಿ ಖಂಬದಕೋಣೆ ರೈತರ ಸೇವಾ ಸಹಕಾರಿ ಸಂಘ ಉಪ್ಪುಂದ ಇವರ ಸಹಭಾಗಿತ್ವದಲ್ಲಿ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ಅಂಧತ್ವ ನಿವಾರಣಾ ವಿಭಾಗ, ಪ್ರಾಥಮಿಕ ಆರೋಗ್ಯ ಕೇಂದ್ರ ಕಿರಿಮಂಜೇಶ್ವರ, ಇನ್ನರ್‌ವೀಲ್ ಕ್ಲಬ್ ಬೈಂದೂರು, ಪಾರ್ವತಿ ಮಹಾಬಲ ಶೆಟ್ಟಿ ಚಾರಿಟೇಬಲ್ ಟ್ರಸ್ಟ್ ಮುದ್ದುಮನೆ ಶಿರೂರು ಇವರ ಸಹಯೋಗದಲ್ಲಿ ಮಂಗಳವಾರ ಮೇಕೋಡು ಶ್ರೀ ಮೇಕೋಡಮ್ಮ ಸಭಾಭವನದಲ್ಲಿ ನಡೆದ ಉಚಿತ ನೇತ್ರ ತಪಾಸಣೆ, ಶಸ್ತ್ರಚಿಕಿತ್ಸಾ ಮತ್ತು ಮಧುಮೇಹ ತಪಾಸಣಾ ಶಿಬಿರ ಉದ್ಘಾಟಿಸಿ ಮಾತನಾಡಿದರು.

ರೋಟರಿ ಕ್ಲಬ್ ಅಧ್ಯಕ್ಷ ಡಾ. ಪ್ರವೀಣ್ ಶೆಟ್ಟಿ ಅಧ್ಯಕ್ಷತೆವಹಿಸಿದ್ದರು. ನೇತ್ರತಜ್ಞ್ಞೆ ಡಾ. ರಶ್ಮಿ ಶೆಟ್ಟಿ ಕಣ್ಣಿನ ಆರೋಗ್ಯದ ಮಹತ್ವವನ್ನು ತಿಳಿಸಿದರು. ಟ್ರಸ್ಟ್‌ನ ಪ್ರತಿನಿಧಿ ಶಂಕರ ಶೆಟ್ಟಿ ತಮ್ಮ ಆಸ್ಪತ್ರೆಯ ಸಾಮಾಜಿಕ ಕಾರ್ಯಕ್ರಮಗಳ ಹಾಗೂ ಉಚಿತ ಸೌಲಭ್ಯಗಳ ಕುರಿತು ಮಾಹಿತಿ ನೀಡಿದರು. ಹೇರೂರು ಗ್ರಾಪಂ ಅಧ್ಯಕ್ಷ ಸುರೇಶ್ ನಾಯ್ಕ್, ವೈದ್ಯಾಧಿಕಾರಿ ಡಾ. ನಿಶಾ, ರೋಟರಿ ಸದಸ್ಯರು, ಆಸ್ಪತ್ರೆ ಸಿಬ್ಬಂದಿಗಳು ಇದ್ದರು. ರಮೇಶ ಜೋಗಿ ಸ್ವಾಗತಿಸಿ, ಇನ್ನರ್‌ವ್ಹೀಲ್ ಅಧ್ಯಕ್ಷೆ ಶಾಂತಿ ಪಿರೇರಾ ವಂದಿಸಿದರು. ರೋಟರಿ ಕಾರ್ಯದರ್ಶಿ ವೈ. ಮಂಗೇಶ ಶ್ಯಾನುಭಾಗ್ ನಿರೂಪಿಸಿದರು.

Exit mobile version