Kundapra.com ಕುಂದಾಪ್ರ ಡಾಟ್ ಕಾಂ

ಬೈಂದೂರು ಸರ್ಕಾರಿ ಪಿಯು ಕಾಲೇಜಿನಲ್ಲಿಯೂ ಹಿಜಾಬ್ – ಕೇಸರಿ ಶಾಲು ವಿವಾದ

ಕುಂದಾಪ್ರ ಡಾಟ್ ಕಾಂ ಸುದ್ದಿ.
ಬೈಂದೂರು:
ಇಲ್ಲಿನ ಸರಕಾರಿ ಕಾಲೇಜಿನಲ್ಲಿಯೂ ಹಿಜಬ್‌ ಹಾಗೂ ಕೇಸರಿ ಶಾಲು ವಿವಾದ ನಡೆದಿದೆ. ಬೈಂದೂರು ಸರಕಾರಿ ಪದವಿಪೂರ್ವ ಕಾಲೇಜಿನ ಮುನ್ನೂರಕ್ಕೂ ಅಧಿಕ ವಿದ್ಯಾರ್ಥಿಗಳು ಕೇಸರಿ ಶಾಲು ಧರಿಸಿ ಕಾಲೇಜಿಗೆ ಹಾಜರಾಗಿದರೆ, ಹಿಜಾಬ್ ಧರಿಸಿದ ವಿದ್ಯಾರ್ಥಿನಿಯರೂ ತರಗತಿಗೆ ಪ್ರವೇಶ ಪಡೆದಿದ್ದಾರೆ.

ಬೈಂದೂರಿನ ಸರಕಾರಿ ಪದವಿ ಪೂರ್ವ ಕಾಲೇಜಿನಲ್ಲಿ ವಿದ್ಯಾರ್ಥಿನಿಯರಿಗೆ ಹಿಜಬ್‌ ಧರಿಸಿ ಕಾಲೇಜು ಪ್ರವೇಶಕ್ಕೆ ಅವಕಾಶ ನೀಡಬಾರದು ಎಂದು ಆಗ್ರಹಿಸಿ ಕಾಲೇಜಿನ ಸುಮಾರು 300ಕ್ಕೂ ಅಧಿಕ ವಿದ್ಯಾರ್ಥಿಗಳು ಕೇಸರಿ ಶಾಲು ಧರಿಸಿ ಬಂದಿದ್ದರು. ಈ ವೇಳೆಯಲ್ಲಿ ಕಾಲೇಜಿನ ಉಪನ್ಯಾಸಕರು ಸಮವಸ್ತ್ರ ಧರಿಸಿದರೆ ಮಾತ್ರವೇ ತರಗತಿಗೆ ಪ್ರವೇಶ ನೀಡುವುದಾಗಿ ತಿಳಿಸಿದ್ದಾರೆ. ಈ ವೇಳೆಯಲ್ಲಿ ಉಪನ್ಯಾಸಕರು ಹಾಗೂ ಸಂಘಟನೆಯ ಕಾರ್ಯಕರ್ತರ ನಡುವೆ ವಾಗ್ವಾದ ನಡೆದಿದೆ. ಅಂತಿಮವಾಗಿ ಹಿಜಾಬ್ ಹಾಗೂ ಕೆಸರಿ ಶಾಲು ಧರಿಸಿದವರನ್ನು ತರಗತಿಗೆ ಪ್ರವೇಶ ನೀಡಲಾಗಿದೆ.

ಇದನ್ನೂ ಓದಿ ಕುಂದಾಪುರ: ಮೂರನೇ ದಿನಕ್ಕೆ ಹಿಜಾಬ್ ವಿವಾದ, ಪೋಷಕರು – ಸಂಘಟಕರ ವಾಗ್ವಾದhttps://kundapraa.com/?p=57132 .

Exit mobile version