Kundapra.com ಕುಂದಾಪ್ರ ಡಾಟ್ ಕಾಂ

ಕುಂದಾಪುರ: ಹಿಜಾಬ್ ವಿವಾದದ ನಡುವೆ ಹಲ್ಲೆ ನಡೆಸುವ ಹುನ್ನಾರ. ಇಬ್ಬರ ಬಂಧನ

ಕುಂದಾಪ್ರ ಡಾಟ್ ಕಾಂ ಸುದ್ದಿ.
ಕುಂದಾಪುರ:
ಇಲ್ಲಿನ ಸರ್ಕಾರಿ ಪದವಿ ಪೂರ್ವ ಕಾಲೇಜಿನ ಎದುರು ರಸ್ತೆಯಲ್ಲಿ ಶುಕ್ರವಾರ ಹಿಜಾಬ್ ಹಾಗೂ ಕೇಸರಿ ಶಾಲು ಧಾರಣೆಯ ವಿಚಾರದಲ್ಲಿ ಪ್ರತಿಭಟನೆ, ಚರ್ಚೆ ನಡೆಯುತ್ತಿರುವಾಗ ಮಾರಕಾಯುಧಗಳೊಂದಿಗೆ ಬಂದಿದ್ದ ಐವರು ಆರೋಪಿಗಳ ಪೈಕಿ ಇಬ್ಬರನ್ನು ಕುಂದಾಪುರ ಪಿಎಸ್ಐ ಸದಾಶಿವ ಗವರೋಜಿ ಹಾಗೂ ಸಿಬ್ಬಂದಿಗಳ ತಂಡ ಬಂಧಿಸಿ ಪ್ರಕರಣ ದಾಖಲಿಸಿದ್ದಾರೆ.

ಪ್ರತಿಭಟನೆ ನಡೆಯುತ್ತಿದ್ದ ಸ್ಥಳದಲ್ಲಿ ಒಂದು ಗುಂಪಿನ ವಿದ್ಯಾರ್ಥಿಗಳ ಪರವಾಗಿ 5-6 ವ್ಯಕ್ತಿಗಳು ಮಾರಕಾಯುಧಗಳೊಂದಿಗೆ ಆಗಮಿಸಿದ್ದು, ಯಾವುದೇ ಸಮಯದಲ್ಲಾದರೂ, ಸಾರ್ವಜನಿಕರ ಜೀವಕ್ಕೆ ಅಪಾಯವಾಗುವ ಸಾಧ್ಯತೆ ಇರುವ ಮಾಹಿತಿ ಪಡೆದುಕೊಂಡ ಪೊಲೀಸರು ಕಾರ್ಯಾಚರಣೆ ನಡೆಸಿ ಇಬ್ಬರನ್ನು ಬಂಧಿಸಿದ್ದಾರೆ.

ಬಂಧಿತರನ್ನು ಗಂಗೊಳ್ಳಿಯ ಅಬ್ದುಲ್ ಮಜೀದ್ (32) ಹಾಗೂ ರಜಬ್ (41) ಎಂದು ಗುರುತಿಸಲಾಗಿದೆ . ಖಲೀಲ್, ರಿಜ್ವಾನ್ ಹಾಗೂ ಇಫ್ತೀಕರ್ ಬಂಧನಕ್ಕೆ ಬಲೆ ಬೀಸಲಾಗಿದೆ. ಕುಂದಾಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Exit mobile version