ಕುಂದಾಪ್ರ ಡಾಟ್ ಕಾಂ ಸುದ್ದಿ.
ಕುಂದಾಪುರ: ಕುಂದಾಪುರದಲ್ಲಿ ಕಳೆದ ನಾಲ್ಕು ದಿನಗಳಿಂದ ಮುನ್ನಲೆಗೆ ಬಂದ ಹಿಜಾಬ್ ವಿವಾದ ಸೋಮವಾರವೂ ಮುಂದುವರಿದಿದ್ದು, ಕುಂದಾಪುರ ಸರ್ಕಾರಿ ಪಿಯು ಕಾಲೇಜು ವಿದ್ಯಾರ್ಥಿನಿಯರು ಎಂದಿನಂತೆ ಹಿಜಾಬ್ ಧರಿಸಿ ಬಂದಿದ್ದರು. ರಾಜ್ಯ ಸರಕಾರ ಕಾಲೇಜು ಆವರಣದೊಳಕ್ಕೆ ಸಮವಸ್ತ್ರ ಧರಿಸಿದ ವಿದ್ಯಾರ್ಥಿಗಳ ಹೊರತಾಗಿ ಇತರರಿಗೆ ಪ್ರವೇಶವಿಲ್ಲ ಎಂಬ ಆದೇಶ ಹೊರಡಿಸಿದ್ದರಿಂದ ಪ್ರಾಂಶುಪಾಲರು ಮನವೊಲಿಸುವ ಪ್ರಯತ್ನ ಮಾಡಿದರಾದರೂ ವಿದ್ಯಾರ್ಥಿನಿಯರು ಒಪ್ಪದ ಕಾರಣ ಅವರನ್ನು ಪ್ರತ್ಯೇಕ ಕೊಠಡಿಯಲ್ಲಿ ಕೂರಿಸಲಾಯಿತು.
ಕುಂದಾಪುರ ಕಾಗೇರಿಯ ಸರಕಾರಿ ಪ್ರಥಮ ದರ್ಜೆ ಕಾಲೇಜಿನ ಮೂವರು ವಿದ್ಯಾರ್ಥಿನಿಯರು ಹಿಜಾಬ್ ಧರಿಸಿ ಬಂದಿದ್ದರಿಂದ, ಒಂದಷ್ಟು ವಿದ್ಯಾರ್ಥಿಗಳು ಕೇಸರಿ ಶಾಲು ಧರಿಸಿದರು. ಕಾಲೇಜು ಆವರಣದೊಳಕ್ಕೆ ಇಬ್ಬರಿಗೂ ಪ್ರವೇಶ ನಿರಾಕರಿಸಿದ್ದರಿಂದ ಮೂವರು ವಿದ್ಯಾರ್ಥಿನಿಯರು ಮನೆಗೆ ಹಿಂದಿರುಗಿದರೆ, ವಿದ್ಯಾರ್ಥಿಗಳು ಕೆಸರಿ ಶಾಲು ಕಳಚಿ ತರಗತಿ ಪ್ರವೇಶಿಸಿದರು.
ಕುಂದಾಪುರದ ವೆಂಕಟರಮಣ ಪಿಯು ಕಾಲೇಜಿನ ಕೆಲವು ವಿದ್ಯಾರ್ಥಿಗಳು, ಹಿಜಾಬ್ ಧರಿಸುವುದಕ್ಕೆ ಪ್ರತಿರೋಧಿಸಿ ಕೇಸರಿ ಶಾಲು ಧರಿಸಿ ಬಂದ ಘಟನೆಯೂ ನಡೆಯಿತು. ಕಾಲೇಜು ಆವರಣದೊಳಕ್ಕೆ ಹಿಜಾಬ್ ಹಾಗೂ ಕೇಸರಿ ಶಾಲು ಧರಿಸಿದವರಿಗೆ ಪ್ರಾಂಶುಪಾಲರು ಪ್ರವೇಶ ನಿರಾಕರಿಸಿದರು.
ಕುಂದಾಪುರ ಡಿವೈಎಸ್‌ಪಿ ಶ್ರೀಕಾಂತ್ ಅವರ ಮಾರ್ಗದರ್ಶನದಲ್ಲಿ ಬೀಗು ಪೊಲೀಸ್ ಬಂದೋವಸ್ತ್ ಏರ್ಪಡಿಸಲಾಗಿತ್ತು. ಎಲ್ಲಾ ಕಾಲೇಜುಗಳು ಎದುರು ಪೊಲೀಸರ ನಿಯೋಜಿಸಲಾಗಿತ್ತು.
ಇದನ್ನೂ ಓದಿ ► ಅವರು ಹಿಜಾಬ್‌ನೊಂದಿಗೆ ತರಗತಿಗೆ ಹೋದ್ರೆ, ನಾವು ಕೇಸರಿ ಶಾಲು ಧರಿಸುತ್ತೇವೆ, ಕುಂದಾಪುರದಲ್ಲಿ ಪ್ರತಿಭಟನೆ – https://kundapraa.com/?p=57248 .