ಕುಂದಾಪ್ರ ಡಾಟ್ ಕಾಂ ಸುದ್ದಿ.
ಕುಂದಾಪುರ: ಕುಂದಾಪುರದಲ್ಲಿ ಹಿಜಾಬ್ – ಕೇಸರಿ ಶಾಲು ವಿವಾದ ಸೋಮವಾರವೂ ಮುಂದುವರಿದಿದೆ. ಕುಂದಾಪುರ ಕಾಗೇರಿಯ ಸರಕಾರಿ ಪ್ರಥಮ ದರ್ಜೆ ಕಾಲೇಜು ಹಾಗೂ ಖಾಸಗಿ ಪಿಯು ಕಾಲೇಜಿನ ವಿದ್ಯಾರ್ಥಿಗಳು ಕೇಸರಿ ಶಾಲು ಧರಿಸಿ ಪ್ರತಿಭಟನೆ ನಡೆಸಿದ್ದಾರೆ.
ಕುಂದಾಪುರ ಕಾಗೇರಿಯ ಸರಕಾರಿ ಪ್ರಥಮ ದರ್ಜೆ ಕಾಲೇಜಿನ ಮೂವರು ವಿದ್ಯಾರ್ಥಿನಿಯರು ಹಿಜಾಬ್ ಧರಿಸಿ ಬಂದಿದ್ದರಿಂದ, ಒಂದಷ್ಟು ವಿದ್ಯಾರ್ಥಿಗಳು ಕೇಸರಿ ಶಾಲು ಧರಿಸಿದರು. ಕಾಲೇಜು ಆವರಣದೊಳಕ್ಕೆ ಇಬ್ಬರಿಗೂ ಪ್ರವೇಶ ನಿರಾಕರಿಸಿದ್ದರಿಂದ ಮೂವರು ವಿದ್ಯಾರ್ಥಿನಿಯರು ಮನೆಗೆ ಹಿಂದಿರುಗಿದರೆ, ವಿದ್ಯಾರ್ಥಿಗಳು ಕೆಸರಿ ಶಾಲು ಕಳಚಿ ತರಗತಿ ಪ್ರವೇಶಿಸಿದರು.
ಕುಂದಾಪುರದ ವೆಂಕಟರಮಣ ಪಿಯು ಕಾಲೇಜಿನ ಕೆಲವು ವಿದ್ಯಾರ್ಥಿಗಳು, ಹಿಜಾಬ್ ಧರಿಸುವುದಕ್ಕೆ ಪ್ರತಿರೋಧಿಸಿ ಕೇಸರಿ ಶಾಲು ಧರಿಸಿ ಬಂದು ಮಾರ್ಗಮಧ್ಯದಲ್ಲಿ ಪ್ರತಿಭಟನೆ ನಡೆಸಿದ ಘಟನೆಯೂ ನಡೆಯಿತು. ಕಾಲೇಜು ಆವರಣದೊಳಕ್ಕೆ ಹಿಜಾಬ್ ಹಾಗೂ ಕೇಸರಿ ಶಾಲು ಧರಿಸಿದವರಿಗೆ ಪ್ರಾಂಶುಪಾಲರು ಪ್ರವೇಶ ನಿರಾಕರಿಸಿದರು.
ಎಲ್ಲಾ ಕಾಲೇಜುಗಳ ಎದುರು ಪೊಲೀಸ್ ಬಂದೋವಸ್ತ್ ಏರ್ಪಡಿಸಲಾಗಿತ್ತು.