ಕುಂದಾಪ್ರ ಡಾಟ್ ಕಾಂ ಸುದ್ದಿ.
ಕುಂದಾಪುರ: ಕರ್ನಾಟಕ ರಾಜ್ಯ ಸರಕಾರಿ ನೌಕರರ ಉಡುಪಿ ಜಿಲ್ಲಾಮಟ್ಟದ ಕ್ರೀಡಾಕೂಟದಲ್ಲಿ ಹೆಸಕುತ್ತೂರು ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯ ಸಹಶಿಕ್ಷಕ ರವೀಂದ್ರ ನಾಯಕ್ 400 ಮೀ ಓಟದಲ್ಲಿ ಪ್ರಥಮ ಸ್ಥಾನ, 800 ಮೀ ಓಟದಲ್ಲಿ ಪ್ರಥಮ ಸ್ಥಾನ, ಕಬಡ್ಡಿಯಲ್ಲಿ ದ್ವಿತೀಯ ಸ್ಥಾನದೊಂದಿಗೆ ವೈಯಕ್ತಿಕ ಚಾಂಪಿಯನ್ ಆಗಿ ಮೂಡಿಬಂದು ರಾಜ್ಯಮಟ್ಟದ ಸ್ಪರ್ಧೆಗೆ ಆಯ್ಕೆಯಾಗಿದ್ದಾರೆ.