Kundapra.com ಕುಂದಾಪ್ರ ಡಾಟ್ ಕಾಂ

ಎಂ.ಕಾಂ. ವಿಭಾಗದ ವಿದ್ಯಾರ್ಥಿಗಳಿಗೆ ಅಭಿ ವಿನ್ಯಾಸ ಕಾರ್ಯಕ್ರಮ

ಕುಂದಾಪ್ರ ಡಾಟ್ ಕಾಂ ಸುದ್ದಿ.
ಕುಂದಾಪುರ:
ವಿದ್ಯಾರ್ಥಿಗಳು ಪುಸ್ತಕ ಸ್ನೇಹಿ ಮನೋಭಾವನೆಯನ್ನು ರೂಡಿಸಿಕೊಂಡು ವೃತ್ತಿ ಪರತೆಯನ್ನು ಕಾಯ್ದುಕೊಳ್ಳಬೇಕೆಂದು ಸರಕಾರಿ ಪ್ರಥಮ ದರ್ಜೆ ಕಾಲೇಜು ಹಾಗೂ ಸ್ನಾತಕೋತ್ತರ ಅಧ್ಯಯನ ಕೇಂದ್ರ ಶಂಕರನಾರಾಯಣ ಇಲ್ಲಿನ ವಾಣಿಜ್ಯ ವಿಭಾಗದ ಸಹಾಯಕ ಪ್ರಾಧ್ಯಾಪಕಿ ವಿಜಯಾ ಬಿ ಹೇಳಿದರು.

ಅವರು ಕೋಟೇಶ್ವರದ ಶ್ರೀ ಕಾಳಾವರ ವರದರಾಜ ಎಂ. ಶೆಟ್ಟಿ ಸರ್ಕಾರಿ ಪ್ರಥಮ ದರ್ಜೆ ಕಾಲೇಜು ಮತ್ತು ಸ್ನಾತಕೋತ್ತರ ಆಧ್ಯಯನ ಕೇಂದ್ರದಲ್ಲಿ ವಾಣಿಜ್ಯ ವಿಭಾಗದ ಸ್ನಾತಕೋತ್ತರ ಘಟಕದ ನೇತೃತ್ವದಲ್ಲಿ ಜರುಗಿದ ಸ್ನಾತಕೋತ್ತರ ವಿಭಾಗದ ಎಂ.ಕಾಂ. ವಿದ್ಯಾರ್ಥಿಗಳಿಗೆ ಅಭಿವಿನ್ಯಾಸ ಕಾರ್ಯಕ್ರಮವನ್ನು ನೆರವೇರಿಸಿ ಸಂಪನ್ಮೂಲ ವ್ಯಕ್ತಿಗಳಾಗಿ ಮಾತನಾಡಿದರು.

ಕಾಲೇಜಿನ ಪ್ರಾಂಶುಪಾಲ ಡಾ. ರಾಜೆಂದ್ರ ಎಸ್.ನಾಯಕ್ ಅಧ್ಯಕ್ಷತೆ ವಹಿಸಿದ್ದರು. ಕಾಲೇಜಿನ ವಿದ್ಯಾರ್ಥಿ ಕ್ಷೇಮಪಾಲನಾಧಿಕಾರಿ ಡಾ. ಉಷಾದೇವಿ ಜೆ.ಎಸ್., ವಾಣಿಜ್ಯ ವಿಭಾಗದ ಮುಖ್ಯಸ್ಥ ಡಾ.ಶೇಖರ ಬಿ., ಐಕ್ಯೂಎಸಿ ಸಂಚಾಲಕ ನಾಗರಾಜ ಯು., ಸ್ನಾತಕೋತ್ತರ ವಿಭಾಗದ ಸಂಯೋಜಕಿ ಡಾ.ಗೀತಾ ಎಂ. ಉಪಸ್ಥಿತರಿದ್ದರು.

ಎಂ.ಕಾಂ. ವಿದ್ಯಾರ್ಥಿಗಳಾದ ಪಲ್ಲವಿ, ಪವಿತ್ರ ಹಾಗೂ ಸಂಗೀತಾ ಪ್ರಾರ್ಥಿಸಿದರು. ಸ್ನಾತಕೋತ್ತರ ವಿಭಾಗದ ಸಂಯೋಜಕಿ ಡಾ. ಗೀತಾ ಎಂ. ಸ್ವಾಗತಿಸಿದರು. ಎಂ.ಕಾಂ. ವಿದ್ಯಾರ್ಥಿನಿ ಸಿದ್ಧಿ ಕಾಮತ್ ಕಾರ್ಯಕ್ರಮ ನಿರ್ವಹಿಸಿದರು. ವಾಣಿಜ್ಯ ಶಾಸ್ತ್ರ ವಿಭಾಗದ ಸಹಾಯಕ ಪ್ರಾಧ್ಯಾಪಕ ಸಂತೋಷ್ ನಾಯ್ಕ್ ಹೆಚ್. ವಂದಿಸಿದರು.

Exit mobile version