ಕುಂದಾಪ್ರ ಡಾಟ್ ಕಾಂ ಸುದ್ದಿ.
ಬೈಂದೂರು: ಬೈಂದೂರು ತಾಲೂಕು ಕನ್ನಡ ಸಾಹಿತ್ಯ ಪರಿಷತ್ತಿನ ಅಧ್ಯಕ್ಷರಾಗಿ ಡಾ. ರಘು ನಾಯ್ಕ್ ಅವರನ್ನು ಆಯ್ಕೆಮಾಡಲಾಗಿದೆ.
ಬೈಂದೂರು ತಾಲೂಕಿನ ಗೋಳಿಹೊಳೆಯವರಾದ ಡಾ. ರಘು ನಾಯ್ಕ್ ಅವರು ಪ್ರಸ್ತುತ ಬೈಂದೂರು ಪ್ರಥಮ ದರ್ಜೆ ಕಾಲೇಜಿನ ಪ್ರಾಂಶುಪಾಲರಾಗಿ ಕಾರ್ಯನಿರ್ವಹಿಸುತ್ತಿದ್ದಾರೆ. ಸಾಂಸ್ಕೃತಿಕ, ಸಾಹಿತ್ಯ ಹಾಗೂ ಸಾಮಾಜಿಕ ಕಾರ್ಯಗಳ ಮೂಲಕವೂ ಗುರುತಿಸಿಕೊಂಡಿದ್ದಾರೆ.