Site icon Kundapra.com ಕುಂದಾಪ್ರ ಡಾಟ್ ಕಾಂ

ರಾಷ್ಟ್ರಮಟ್ಟದ ಕರಾಟೆ ಸ್ಪರ್ಧೆ: ಶ್ರೀಶಗೆ ಬೆಳ್ಳಿ, ಸೃಜನಗೆ ಕಂಚು

ಕುಂದಾಪ್ರ ಡಾಟ್ ಕಾಂ ಸುದ್ದಿ.
ಕುಂದಾಪುರ: ಎ.ಎಸ್.ಗೋಜು ರಿಯು ಕರಾಟೆ ಅಸೋಸಿಯೇಶನ್ ಇಂಡಿಯಾ ವತಿಯಿಂದ ಫೆ.೨೦ರಂದು ಬೆಂಗಳೂರಿನಲ್ಲಿ ನಡೆದ ಮುಕ್ತ ರಾಷ್ಟ್ರಮಟ್ಟದ ಕರಾಟೆ ಚಾಂಪಿಯನ್‌ಶಿಪ್ ನಲ್ಲಿ ಗುಡ್ರಿ ಸಂತೋಷ ಮತ್ತು ಹೇಮಾವತಿ ದಂಪತಿಗಳ ಪುತ್ರ ಶ್ರೀಶ ಕಟಾ ವಿಭಾಗದಲ್ಲಿ ದ್ವಿತೀಯ ಸ್ಥಾನ ಗಳಿಸಿ ಬೆಳ್ಳಿಯ ಪದಕ ಪಡೆದಿದ್ದಾರೆ. ಇದೇ ವಿಭಾಗದಲ್ಲಿ ಕೆಂಚನೂರಿನ ಸಂತೋಷ ಮತ್ತು ಸುಜಾತ ದಂಪತಿಗಳ ಪುತ್ರ ಸೃಜನ್ ಎಸ್ ಕಂಚಿನ ಪದಕ ಪಡೆದಿದ್ದಾರೆ.

ಇವರು ವಂಡ್ಸೆ ಸರಕಾರಿ ಮಾದರಿ ಹಿರಿಯ ಪ್ರಾಥಮಿಕ ಶಾಲೆಯ ವಿದ್ಯಾರ್ಥಿಗಳಾಗಿದ್ದು, ಕರಾಟೆ ಶಿಕ್ಷಕ ಅಕ್ಷಯ ಇವರಲ್ಲಿ ತರಬೇತಿ ಪಡೆಯುತ್ತಿದ್ದಾರೆ. ಶಾಲೆಯ ವತಿಯಿಂದ ವಿಜೇತರನ್ನು ಅಭಿನಂದಿಸಲಾಯಿತು.

Exit mobile version