Kundapra.com ಕುಂದಾಪ್ರ ಡಾಟ್ ಕಾಂ

ಹರ್ಷನ ಸಾವಿಗೆ ನ್ಯಾಯ ದೊರೆಯುವ ತನಕ ವಿರಮಿಸಲ್ಲ: ಕುಂದಾಪುರ – ಬೈಂದೂರಿನಲ್ಲಿ ಬಿಜೆಪಿ ಖಂಡನಾ ಸಭೆ

ಕುಂದಾಪ್ರ ಡಾಟ್ ಕಾಂ ಸುದ್ದಿ
ಕುಂದಾಪುರ, ಫೆ 24:
ಹಿಂದೂ ಸಮಾಜಕ್ಕೆ ಸವಾಲು ಹಾಕುವ ಉದ್ದೇಶದಿಂದ ಹರ್ಷನನ್ನು ಬಲಿಪಶು ಮಾಡಲಾಗಿದೆ. ಒಂದು ಹರ್ಷನ ಹತ್ಯೆಯಿಂದ ಹಿಂದೂಗಳು ದೃತಿಗೆಡಲಾರರು. ಪ್ರತಿ ಗ್ರಾಮದಲ್ಲಿ ಹರ್ಷ ಹುಟ್ಟುತ್ತಾರೆ, ಹಿಂದೂ ಕಾರ್ಯಕರ್ತ ಹುಟ್ಟುತ್ತಾರೆ. ನಮ್ಮ ಧರ್ಮರಕ್ಷಣೆಯ ಕಾರ್ಯವನ್ನು ಇನ್ನಷ್ಟು ಹೆಚ್ಚಿಸುತ್ತೇವೆ ಎಂದು ಜಿಲ್ಲಾ ಬಿಜೆಪಿ ಉಪಾಧ್ಯಕ್ಷ ಬೈಕಾಡಿ ಸುಪ್ರಸಾದ ಶೆಟ್ಟಿ ಹೇಳಿದರು.

ಅವರು ಶಿವಮೊಗ್ಗದ ಬಜರಂಗದಳ ಕಾರ್ಯಕರ್ತ ಹರ್ಷನ ಹತ್ಯೆ ಖಂಡಿಸಿ ಆಯೋಜಿಸಲಾದ ಸಭೆಯನ್ನುದ್ದೇಶಿಸಿ ಮಾತನಾಡಿ ಹಿಂದೂ ಕಾರ್ಯಕರ್ತರ ಮೇಲೆ ಹಲ್ಲೆ ಮಾಡುವ ಪ್ರಯತ್ನ ನಡೆದರೆ ಅದಕ್ಕೆ ತಕ್ಕ ಉತ್ತರ ನೀಡಲು ನಾವೂ ಸಿದ್ಧರಿದ್ದೇವೆ. ಹರ್ಷನ ಕೊಲೆಗೈದ ಆರೋಪಿಗಳಿಗೆ ಗಲ್ಲು ಶಿಕ್ಷೆಯಾಗುವ ತನಕ ಬಿಜೆಪಿ ವಕೀಲರ ವೇದಿಕೆ ವಿರಮಿಸುವುದಿಲ್ಲ ಎಂದರು.

ಜಿಲ್ಲಾ ಪ್ರಧಾನ ಕಾರ್ಯದರ್ಶಿ ಸದಾನಂದ ಉಪ್ಪಿನಕುದ್ರು, ಕುಂದಾಪುರ ಮಂಡಲ ಅಧ್ಯಕ್ಷ ಶಂಕರ ಅಂಕದಕಟ್ಟೆ ಮಾತನಾಡಿದರು.

ಮೃತ ಹರ್ಷ ಅವರಿಗೆ ಶ್ರದ್ಧಾಂಜಲಿ ಸಲ್ಲಿಸಲಾಯಿತು. ದ.ಕ ಜಿಲ್ಲಾ ಸಹಪ್ರಭಾರಿ ರಾಜೇಶ್ ಕಾವೇರಿ, ರಾಜ್ಯ ಹಿಂದೂಳಿದ ವರ್ಗಗಳ ಕಾರ್ಯದರ್ಶಿ ವಿಠ್ಠಲ ಪೂಜಾರಿ, ಜಿಲ್ಲಾ ಬಿಜೆಪಿ ಕಾರ್ಯದರ್ಶಿ ಸದಾನಂದ ಬಳ್ಕೂರು, ಕುಂದಾಪುರ ಯುವಮೋರ್ಚಾ ಅಧ್ಯಕ್ಷ ಅವಿನಾಶ್ ಉಳ್ತೂರು, ಪುರಸಭಾ ಅಧ್ಯಕ್ಷೆ ವೀಣಾ ಭಾಸ್ಕರ್, ಉಪಾಧ್ಯಕ್ಷ ಸಂದೀಪ್ ಖಾರ್ವಿ, ದಿವಾಕರ ಕಡ್ಕಿಮನೆ, ಗೋಪಾಲ ಕಳಿಂಜೆ ಹಾಗೂ ಮತ್ತಿತರರು ಉಪಸ್ಥಿತರಿದ್ದರು.

ಬೈಂದೂರಿನಲ್ಲಿ ಸಭೆ:
ಬೈಂದೂರು:
ಬೈಂದೂರಿನಲ್ಲಿ ನಡೆದ ಖಂಡನಾ ಸಭೆಯಲ್ಲಿ ಮಂಡಲ ಅಧ್ಯಕ್ಷ ದೀಪಕಕುಮಾರ್ ಶೆಟ್ಟಿ ಮಾತನಾಡಿ, ಭಜರಂಗದಳದ ಕಾರ್ಯಕರ್ತರಾದ ಹರ್ಷ ಅವರ ಕೊಲೆಗೆ ಕಾರಣವಾದ ಎಸ್.ಡಿ.ಪಿ.ಐ ಮತ್ತು ಪಿ.ಎಫ್.ಐ ಸಂಘಟನೆಗಳನ್ನು ನಿಷೇಧಿಸಬೇಕು ಎಂದು ಬೈಂದೂರು ಪೋಲಿಸ್ ವೃತ್ತ ನಿರೀಕ್ಷಕರ ಮೂಲಕ ಗೃಹಸಚಿವರಿಗೆ ಮನವಿ ಸಲ್ಲಿಸಲಾಯಿತು.

ನೇತೃತ್ವದಲ್ಲಿ ಹರ್ಷ ಅವರ ಭಾವಚಿತ್ರಕ್ಕೆ ಪುಷ್ಪಾರ್ಚನೆ ಮಾಡಿ ಶ್ರದ್ಧಾಂಜಲಿ ಸಲ್ಲಿಸಲಾಯಿತು. ಈ ವೇಳೆ ಬೈಂದೂರು ಮಂಡಲದ ಬಿಜೆಪಿ ಪದಾದಿಕಾರಿಗಳು ಹಾಗೂ ಕಾರ್ಯಕರ್ತರು ಉಪಸ್ಥಿತರಿದ್ದರು.

Exit mobile version