Kundapra.com ಕುಂದಾಪ್ರ ಡಾಟ್ ಕಾಂ

ಬಾಲ್ ಬ್ಯಾಡ್ಮಿಂಟನ್: ಗಂಗೊಳ್ಳಿ ಮತ್ತು ಶಿರ್ವ ಶಾಲಾ ತಂಡಗಳು ವಿಭಾಗೀಯ ಮಟ್ಟಕ್ಕೆ

ಗಂಗೊಳ್ಳಿ: ಉಡುಪಿ ಜಿಲ್ಲಾ ಪಂಚಾಯತ್ ಉಡುಪಿ, ಸಾರ್ವಜನಿಕ ಶಿಕ್ಷಣ ಇಲಾಖೆ ಉಡುಪಿ, ಕ್ಷೇತ್ರ ಶಿಕ್ಷಣಾಧಿಕಾರಿಯವರ ಕಛೇರಿ ಕುಂದಾಪುರ ಹಾಗೂ ಸರಸ್ವತಿ ವಿದ್ಯಾಲಯ ಆಂಗ್ಲ ಮಾಧ್ಯಮ ಶಾಲೆ ಗಂಗೊಳ್ಳಿ ಇವರ ಜಂಟಿ ಆಶ್ರಯದಲ್ಲಿ ಗಂಗೊಳ್ಳಿಯ ಶ್ರೀ ರಾಘವೇಂದ್ರ ಸ್ಪೋರ್ಟ್ಸ್ ಕ್ಲಬ್ ಸಹಕಾರದೊಂದಿಗೆ ಗಂಗೊಳ್ಳಿಯ ಸರಸ್ವತಿ ವಿದ್ಯಾಲಯ ಪದವಿಪೂರ್ವ ಕಾಲೇಜಿನ ಕ್ರೀಡಾಂಗಣದಲ್ಲಿ ಜರಗಿದ ಉಡುಪಿ ಜಿಲ್ಲಾ ಮಟ್ಟದ ಪ್ರೌಢಶಾಲಾ ವಿಭಾಗದ ಬಾಲಕರ ಮತ್ತು ಬಾಲಕಿಯರ ಬಾಲ್ ಬ್ಯಾಡ್ಮಿಂಟನ್ ಪಂದ್ಯಾಟದಲ್ಲಿ ಬಾಲಕರ ವಿಭಾಗದಲ್ಲಿ ಗಂಗೊಳ್ಳಿಯ ಸರಸ್ವತಿ ವಿದ್ಯಾಲಯ ಆಂಗ್ಲ ಮಾಧ್ಯಮ ಪ್ರೌಢಶಾಲೆ ತಂಡ ಹಾಗೂ ಬಾಲಕಿಯರ ವಿಭಾಗದಲ್ಲಿ ಉಡುಪಿ ಶಿರ್ವದ ಡಾನ್ ಬಾಸ್ಕೋ ಶಾಲೆಯ ತಂಡ ಪ್ರಥಮ ಸ್ಥಾನ ಪಡೆದು ವಿಭಾಗೀಯ ಮಟ್ಟಕ್ಕೆ ಆಯ್ಕೆಯಾಗಿದೆ.
ಇತ್ತೀಚಿಗೆ ನಡೆದ ಸಮಾರೋಪ ಸಮಾರಂಭದಲ್ಲಿ ಶಾಲೆಯ ಶಿಕ್ಷಕ-ರಕ್ಷಕ ಸಮಿತಿಯ ಉಪಾಧ್ಯಕ್ಷ ಶಿವಾನಂದ ವಿಜೇತ ತಂಡಗಳಿಗೆ ಬಹುಮಾನ ವಿತರಿಸಿ ಶುಭ ಹಾರೈಸಿದರು. ಜಿಲ್ಲಾ ದೈಹಿಕ ಶಿಕ್ಷಣಾಧಿಕಾರಿ ಎಸ್.ಮಧುಕರ, ಕುಂದಾಪುರ ದೈಹಿಕ ಶಿಕ್ಷಣ ಪರಿವೀಕ್ಷಣಾಧಿಕಾರಿ ದತ್ತಾತ್ರೇಯ ನಾಯಕ್, ಉಡುಪಿ ದೈಹಿಕ ಶಿಕ್ಷಣ ಪರಿವೀಕ್ಷಣಾಧಿಕಾರಿ ಬಸವರಾಜ್, ಬೈಂದೂರು ದೈಹಿಕ ಶಿಕ್ಷಣ ಪರಿವೀಕ್ಷಣಾಧಿಕಾರಿ ರಾಜು ಪೂಜಾರಿ, ಸೀತಾರಾಮ ಶೆಟ್ಟಿ ಕಳತ್ತೂರು, ಸರಸ್ವತಿ ವಿದ್ಯಾಲಯ ಪದವಿಪೂರ್ವ ಕಾಲೇಜಿನ ಪ್ರಾಂಶುಪಾಲ ಆರ್.ಎನ್. ರೇವಣ್‌ಕರ್, ಕಾಲೇಜಿನ ದೈಹಿಕ ಶಿಕ್ಷಣ ನಿರ್ದೇಶಕ ನಾಗರಾಜ ಶೆಟ್ಟಿ, ಸರಸ್ವತಿ ವಿದ್ಯಾಲಯ ಆಂಗ್ಲ ಮಾಧ್ಯಮ ಶಾಲೆಯ ಮುಖ್ಯಶಿಕ್ಷಕ ರಾಘವೇಂದ್ರ ಶೇರುಗಾರ್, ದೈಹಿಕ ಶಿಕ್ಷಣ ಶಿಕ್ಷಕ ರತ್ನಾಕರ ಶೆಟ್ಟಿ ಮೊದಲಾದವರು ಉಪಸ್ಥಿತರಿದ್ದರು.

Exit mobile version