Kundapra.com ಕುಂದಾಪ್ರ ಡಾಟ್ ಕಾಂ

8 ಸ್ಟಾರ್ ಉಪ್ಪುಂದ ತಂಡಕ್ಕೆ ‘ಯಡ್ತರೆ ಟ್ರೋಫಿ – 2022’

ಕುಂದಾಪ್ರ ಡಾಟ್ ಕಾಂ ಸುದ್ದಿ.
ಬೈಂದೂರು:
ಇಲ್ಲಿನ ಯಡ್ತರೆ ಫ್ರೆಂಡ್ಸ್ ಆಶ್ರಯದಲ್ಲಿ ಜರುಗಿದ ಬೈಂದೂರು ತಾಲೂಕು ಮಟ್ಟದ ಎರಡು ದಿನಗಳ 30 ಗಜಗಳ ಕ್ರಿಕೆಟ್ ಪಂದ್ಯಾಟದಲ್ಲಿ 8 ಸ್ಟಾರ್ ಉಪ್ಪುಂದ ತಂಡ ‘ಯಡ್ತರೆ ಟ್ರೋಫಿ 2022’ ಗೆದ್ದುಕೊಂಡರೆ, ವಿ.ಎಫ್.ಸಿ ನಾಗೂರು ತಂಡ ರನ್ನರ್ ಅಪ್ ಆಗಿ ಹೊರಹೊಮ್ಮಿತು.

ಭಾನುವಾರ ನಡೆದ ಸಮಾರೋಪ ಸಮಾರಂಭದಲ್ಲಿ ಜಿ.ಪಂ ಮಾಜಿ ಅಧ್ಯಕ್ಷ ಎಸ್. ರಾಜು ಪೂಜಾರಿ ಅವರು ಮಾತನಾಡಿ, ಕ್ರೀಡಾ ಚಟುವಟಿಕೆಗಳಿಂದ ಸಂಘಟನೆ ಸಾಧ್ಯವಿದೆ. ಮಕ್ಕಳು ಹೆಚ್ಚೆಚ್ಚು ಕ್ರೀಡೆಯಲ್ಲಿ ತೊಡಗಿಕೊಳ್ಳುವುದರಿಂದ ಆತ್ಮಸ್ಥೈರ್ಯ, ಮನೋಬಲ ಹೆಚ್ಚುತ್ತದೆ. ಇದರಿಂದ ಭವಿಷ್ಯವನ್ನು ಉತ್ತಮವಾಗಿ ರೂಪಿಸಿಕೊಳ್ಳಲು, ಕಷ್ಟದ ಸಂದರ್ಭವನ್ನು ಎದುರಿಸಲು ಸಾಧ್ಯವಾಗುತ್ತದೆ ಎಂದರು.

ಶ್ರೀ ವರಲಕ್ಷ್ಮೀ ಚಾರಿಟೇಬಲ್ ಟ್ರಸ್ಟ್ ಅಧ್ಯಕ್ಷ, ಉದ್ಯಮಿ ಡಾ. ಗೋವಿಂದ ಬಾಬು ಪೂಜಾರಿ ಅವರು ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಕ್ರೀಡೆ, ಕಲೆ ಹಾಗೂ ಇನ್ನಿತರ ಚಟುವಟಿಕೆಗಳು ಪ್ರೋತ್ಸಾಹದಿಂದ ಮಾತ್ರ ಮುಂದುವರಿಯಲು ಸಾಧ್ಯವಿದೆ. ಅಗತ್ಯ ವೇಳೆಯಲ್ಲಿ ನೀಡುವ ಪ್ರೋತ್ಸಾಹ ಮುಂದಿನ ದೊಡ್ಡ ಯಶಸ್ಸಿಗೆ ದಾರಿಯಾಗುತ್ತದೆ ಎಂದರು.

ಹಟ್ಟಿಯಂಗಡಿ ಶ್ರೀ ಸಿದ್ಧಿವಿನಾಯಕ ವಸತಿ ಶಾಲೆಯ ಉಪಪ್ರಾಂಶುಪಾಲ ರಾಮ ದೇವಾಡಿಗ, ಜೆಸಿಐ ಸ್ಥಾಪಕಾಧ್ಯಕ್ಷ ಮಣಿಕಂಠ ದೇವಾಡಿಗ, ಉದ್ಯಮಿಗಳಾದ ವಿಲ್ಸನ್ ಡಯಾಸ್, ಕ್ಲೆಮೆಂಟ್ ಡಯಾಸ್, ಕುಂದಾಪ್ರ ಡಾಟ್ ಕಾಂ ಸಂಪಾದಕ ಸುನಿಲ್ ಹೆಚ್. ಜಿ. ಬೈಂದೂರು ಮೊದಲಾದವರು ಉಪಸ್ಥಿತರಿದ್ದರು.

ಈ ಸಂದರ್ಭ ಶ್ರೀ ವರಲಕ್ಷ್ಮೀ ಚಾರಿಟೇಬಲ್ ಟ್ರಸ್ಟ್ ಅಧ್ಯಕ್ಷ ಡಾ. ಗೋವಿಂದ ಬಾಬು ಪೂಜಾರಿ, ಕಲಾವಿದ ನಾಗೇಂದ್ರ ಬಂಕೇಶ್ವರ, ಬಾಲಪ್ರತಿಭೆ ರಿಷಿಕಾ ದೇವಾಡಿಗ ಅವರನ್ನು ಸನ್ಮಾನಿಸಲಾಯಿತು. ಲಕ್ಕಿ ಡ್ರಾ ವಿಜೇತ ಐವರು ಅದೃಷ್ಟಶಾಲಿಗಳು ಬಹುಮಾನ ತನ್ನದಾಗಿಸಿಕೊಂಡರು. ಬಳಿಕ ಸಾಂಸ್ಕೃತಿಕ ಕಾರ್ಯಕ್ರಮಗಳು ನಡೆದವು.

ಕನ್ನಡ ಉಪನ್ಯಾಸಕಿ ಮೀನಾಕ್ಷಿ ಅಶೋಕ್ ಕಾರ್ಯಕ್ರಮ ನಿರೂಪಿಸಿ, ವಿಘ್ನೇಶ್ ವಂದಿಸಿದರು.

Exit mobile version