Kundapra.com ಕುಂದಾಪ್ರ ಡಾಟ್ ಕಾಂ

ನಾರಾಯಣ ವಿಶೇಷ ಮಕ್ಕಳ ಶಾಲೆ: ಮಕ್ಕಳ ಹಕ್ಕುಗಳ ಬಗ್ಗೆ ಮಾಹಿತಿ ಕಾರ್ಯಕ್ರಮ

ಕುಂದಾಪ್ರ ಡಾಟ್ ಕಾಂ ಸುದ್ದಿ.
ಕುಂದಾಪುರ:
ತಲ್ಲೂರು ನಾರಾಯಣ ವಿಶೇಷ ಮಕ್ಕಳ ಶಾಲೆಯಲ್ಲಿ ವಿಶೇಷ ಮಕ್ಕಳ ಹಕ್ಕುಗಳ ಬಗ್ಗೆ ಮಾಹಿತಿ ಕಾರ್ಯಕ್ರಮ ಹಾಗೂ ಪಾಲಕರ ಸಭೆ ಮಂಗಳವಾರ ನಡೆಯಿತು.

ಕಾರ್ಯಕ್ರಮದಲ್ಲಿ ನ್ಯಾಯವಾದಿ ಶರತ್ಚಂದ್ರ ಶೆಟ್ಟಿ ಅವರು ವಿಶೇಷ ಮಕ್ಕಳ ಹಕ್ಕುಗಳು, ಪೋಷಕರ ಮತ್ತು ಸಂಸ್ಥೆಯ ಜವಾಬ್ದಾರಿಗಳ ಬಗ್ಗೆ ಹಾಗೂ ವಿಶೇಷ ಮಕ್ಕಳಿಗೆ ಕಾನೂನಿನಲ್ಲಿ ಇರುವ ಅವಕಾಶಗಳ ಮಾಹಿತಿಯನ್ನು ನೀಡಿದರು.

ಮುಖ್ಯ ಅತಿಥಿಗಳಾಗಿ ವಕೀಲರಾದ ಟಿ. ಬಿ ಶೆಟ್ಟಿ ಮಾತನಾಡಿ ಸಂಸ್ಥೆಯ ಕಾರ್ಯ ಚಟುವಟಿಕೆಗಳ ಬಗ್ಗೆ ಮೆಚ್ಚುಗೆಯ ಮಾತುಗಳನ್ನು ಆಡಿದರು.

ವಕೀಲರ ಸಂಘದ ಅಧ್ಯಕ್ಷರಾದ ಸಳ್ವಾಡಿ ನಿರಂಜನ ಹೆಗ್ಡೆ, ವಕೀಲರಾದ ರಾಜು ಪೂಜಾರಿ, ಪಂಚಾಯತ್ ಸದಸ್ಯ ಜುಡಿತ್ ಮೆಂಡೋನ್ಸಾ ಉಪಸ್ಥಿತರಿದ್ದರು. ಮುಖ್ಯ ಶಿಕ್ಷಕಿ ಪ್ರೇಮ ಸ್ವಾಗತಿಸಿದರು .ತಲ್ಲೂರು ಫ್ಯಾಮಿಲಿ ಟ್ರಸ್ಟ್ ಮ್ಯಾನೇಜಿಂಗ್ ಟ್ರಸ್ಟಿ ಸುರೇಶ್ ತಲ್ಲೂರು ಪ್ರಾಸ್ತಾವಿಕ ಮಾತುಗಳನ್ನಾಡಿದರು. ಸಹಶಿಕ್ಷಕಿ ಶ್ರೃತಿ ವಂದಿಸಿದರು. ಸಹ ಶಿಕ್ಷಕಿ ದೀಪಾ ಕಾರ್ಯಕ್ರಮ ನಿರೂಪಿಸಿದರು.

Exit mobile version