Kundapra.com ಕುಂದಾಪ್ರ ಡಾಟ್ ಕಾಂ

ಮಹಾನ್ ಸೇನಾನಿ ಜನರಲ್ ಬಿಪಿನ್ ರಾವತ್ ಕೃತಿ ಲೋಕಾರ್ಪಣೆ

ಕುಂದಾಪ್ರ ಡಾಟ್ ಕಾಂ ಸುದ್ದಿ.
ಬೈಂದೂರು:
ನಿವೃತ್ತ ಸೈನಿಕ, ಲೇಖಕ ಬೈಂದೂರು ಚಂದ್ರಶೇಖರ ನಾವಡ ಅವರ ‘ಮಹಾನ್ ಸೇನಾನಿ ಜನರಲ್ ಬಿಪಿನ್ ರಾವತ್’ ಕೃತಿ ಲೋಕಾರ್ಪಣೆ ಸಮಾರಂಭ ಭಾನುವಾರ ಉಪ್ಪುಂದ ರೈತಸಿರಿ ಸಭಾಭವನದಲ್ಲಿ ನಡೆಯಿತು.

ಖಂಬದಕೋಣೆ ರೈತರ ಸೇವಾ ಸಹಕಾರಿ ಸಂಘ ನಿ, ಕನ್ನಡ ಸಾಹಿತ್ಯ ಪರಿಷತ್ತು ಬೈಂದೂರು ತಾಲೂಕು ಘಟಕ ಇವರ ಸಂಯುಕ್ತ ಆಶ್ರಯದಲ್ಲಿ ಆಯೋಜಿಸಲಾದ ಪುಸ್ತಕ ಬಿಡುಗಡೆ ಕಾರ್ಯಕ್ರಮದಲ್ಲಿ ಖಂಬದಕೋಣೆ ರೈತರ ಸೇವಾ ಸಹಕಾರಿ ಸಂಘ ನಿ, ಉಪ್ಪುಂದ ಇದರ ಅಧ್ಯಕ್ಷ ಪ್ರಕಾಶ್ಚಂದ್ರ ಶೆಟ್ಟಿ ಅವರು ಕಾರ್ಯಕ್ರಮ ಉದ್ಘಾಟಿಸಿ, ‘ಮಹಾನ್ ಸೇನಾನಿ ಜನರಲ್ ಬಿಪಿನ್ ರಾವತ್’ ಕೃತಿಯನ್ನು ಲೋಕಾರ್ಪಣೆ ಮಾಡಿದರು.

ಉಡುಪಿ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತ್ ಜಿಲ್ಲಾಧ್ಯಕ್ಷ ನೀಲಾವರ ಸುರೇಂದ್ರ ಅಡಿಗ ಸಮಾರಂಭದ ಅಧ್ಯಕ್ಷತೆ ವಹಿಸಿದ್ದರು. ಕುಂದಾಪುರ ತಾಲೂಕು ಕನ್ನಡ ಸಾಹಿತ್ಯ ಪರಿಷತ್ ಅಧ್ಯಕ್ಷ ಡಾ. ಉಮೇಶ್ ಪುತ್ರನ್ ಕೃತಿ ಪರಿಚಯಿಸಿದರು. ಸಾಹಿತಿ ಪುಂಡಲೀಕ ನಾಯಕ್ ನಾಯ್ಕನಕಟ್ಟೆ ರೋಟರಿ ಕ್ಲಬ್ ಬೈಂದೂರು ಇದರ ಅಧ್ಯಕ್ಷ ಡಾ ಪ್ರವೀಣ್ ಶೆಟ್ಟಿ ಅತಿಥಿಗಳಾಗಿ ಭಾಗವಹಿಸಿದ್ದರು.

ಮಂಗಳೂರಿನ ಅವನಿ ಪ್ರಕಾಶನ ಇದರ ಮುಖ್ಯಸ್ಥರಾದ ಶ್ರೀಪತಿ ಆಚಾರ್ಯ ಇವರನ್ನು ಸನ್ಮಾನಿಸಿ ಗೌರವಿಸಲಾಯಿತು. ಲೇಖಕ ಬೈಂದೂರು ಚಂದ್ರಶೇಖರ ನಾವಡ ಉಪಸ್ಥಿತರಿದ್ದರು.

ಲಾವಣ್ಯ ರಿ ಬೈಂದೂರು ಇದರ ಅಧ್ಯಕ್ಷ ಹರೆಗೋಡು ಉದಯ್ ಆಚಾರ್ ಪ್ರಾರ್ಥನೆಗೈದರು, ಬೈಂದೂರು ತಾಲೂಕು ಕನ್ನಡ ಸಾಹಿತ್ಯ ಪರಿಷತ್ತ ಅಧ್ಯಕ್ಷ ಡಾ ರಘು ನಾಯ್ಕ ಸ್ವಾಗತಿಸಿ, ಪ್ರಾಸ್ತಾವಿಕ ಮಾತನಾಡಿದರು. ಬೈಂದೂರು ಪ್ರಥಮ ದರ್ಜೆ ಕಾಲೇಜಿನ ಉಪನ್ಯಾಸಕಿ ಮೀನಾಕ್ಷಿ ಕಾರ್ಯಕ್ರಮ ನಿರೂಪಿಸಿದರು.

Exit mobile version