Site icon Kundapra.com ಕುಂದಾಪ್ರ ಡಾಟ್ ಕಾಂ

ವಂಡ್ಸೆ: ಮಹಿಳಾ ಸಾಧಕರಿಗೆ ಗೌರವಾರ್ಪಣೆ

ಕುಂದಾಪ್ರ ಡಾಟ್ ಕಾಂ ಸುದ್ದಿ.
ಕುಂದಾಪುರ:
ಬೃಂದಾವನ ಸಂಜೀವಿನಿ ಒಕ್ಕೂಟ ವಂಡ್ಸೆ ಗ್ರಾಮ ಪಂಚಾಯತ್‌ನಲ್ಲಿ ಇಂದು ಮಹಾತ್ಮಗಾಂಧಿ ಸಭಾಭವನದಲ್ಲಿ ಮಹಿಳಾ ದಿನಾಚರಣೆ ಕಾರ್ಯಕ್ರಮ ನಡೆಸಲಾಯಿತು. ವಂಡ್ಸೆ ಪಂಚಾಯಿತಿ ಅಧ್ಯಕ್ಷರಾದ ಉದಯ್ ಕುಮಾರ್ ಶೆಟ್ಟಿ ಅಧ್ಯಕ್ಷತೆ ವಹಿಸಿದ್ದರು. ಗ್ರಾಮ ಪಂಚಾಯಿತಿ ಅಭಿವೃದ್ಧಿ ಅಧಿಕಾರಿ ರೂಪ ಗೋಪಿ, ಒಕ್ಕೂಟದ ಅಧ್ಯಕ್ಷೆ ಆಶಾ ಟಿ., ಸ್ತ್ರೀಶಕ್ತಿ ಅಧ್ಯಕ್ಷೆ ಜುಲೇಖಾ, ಗ್ರಾ.ಪಂ. ಸದಸ್ಯ ಗೋವರ್ಧನ ಜೋಗಿ, ಗ್ರಾ.ಪಂ. ಮಾಜಿ ಸದಸ್ಯ ಗುಂಡು ಪೂಜಾರಿ, ಜಯಂತಿ ಶೆಟ್ಟಿ, ಒಕ್ಕೂಟದ ಪದಾಧಿಕಾರಿಗಳು, ಎಂ.ಬಿ.ಕೆ ಮತ್ತು ಎಲ್.ಸಿ.ಆರ್.ಪಿ ಸ್ವಸಹಾಯ ಸಂಘಗಳ ಸದಸ್ಯರು ಉಪಸ್ಥಿತರಿದ್ದರು.

ಈ ಸಂದರ್ಭದಲ್ಲಿ ವಿವಿಧ ಕ್ಷೇತ್ರಗಳಲ್ಲಿ ಸಾಧನೆ ಮಾಡಿದ ಕೃಷಿಕರು, ಪ್ರಸೂತಿ ತಜ್ಞೆ ಸಿಂಗಾರಿ ಶೆಟ್ಟಿ, ಕಿರಿಯ ಮಹಿಳಾ ಆರೋಗ್ಯ ಸಹಾಯಕಿ ಪಾರ್ವತಿ ಪಟಗಾರ್, ಅಂಗನವಾಡಿ ಕಾರ್ಯಕರ್ತೆ ಪೂರ್ಣಿಮಾ ಶೆಟ್ಟಿ, ಗೃಹೋದ್ಯಮಿ ಸವಿತಾ ಕಾಮತ್ ಅವರನ್ನು ಸನ್ಮಾನಿಸಲಾಯಿತು. ಸ್ಪರ್ಧಾ ವಿಜೇತರಿಗೆ ಬಹುಮಾನ ವಿತರಿಸಲಾಯಿತು.

ಸಂಗೀತಾ ಸ್ವಾಗತಿಸಿದರು, ಆಶಾರಾಣಿ ಕಾರ್ಯಕ್ರಮ ನಿರ್ವಹಿಸಿ ಸಲ್ಮಾ ವಂದಿಸಿದರು.

Exit mobile version