Kundapra.com ಕುಂದಾಪ್ರ ಡಾಟ್ ಕಾಂ

ಗಂಗೊಳ್ಳಿ: ತಾತ್ಕಾಲಿಕ ನೆಲೆಯಲ್ಲಿ ನೇಮಕಗೊಂಡ ಕೋವಿಡ್ ವಾರಿಯರ್ಸ್‌ಗಳಿಗೆ ಬೀಳ್ಕೊಡುಗೆ

ಕುಂದಾಪ್ರ ಡಾಟ್ ಕಾಂ ಸುದ್ದಿ.
ಗಂಗೊಳ್ಳಿ:
ದೇಶದ ಜನರನ್ನು ಕಾಡಿದ ಕೋವಿಡ್ ಮಹಮಾರಿ ನಿರ್ಮೂಲನೆಗಾಗಿ ಜೀವವನ್ನು ಪಣಕ್ಕಿಟ್ಟು ಕೋವಿಡ್ ವಿರುದ್ಧ ಹೋರಾಡಿದ ಕೋವಿಡ್ ವಾರಿಯರ‍್ಸ್‌ಗಳ ಕಾರ್ಯ ಪ್ರಶಂಸನೀಯ. ಕೋವಿಡ್ ಸಂದರ್ಭ ತಾತ್ಕಾಲಿಕ ನೆಲೆಯಲ್ಲಿ ನೇಮಕಗೊಂಡ ನೌಕರರು ಅತ್ಯುತ್ತಮವಾಗಿ ಸೇವೆ ಸಲ್ಲಿಸಿದ್ದು, ಕೋವಿಡ್ ಪ್ರಕರಣ ಕಡಿಮೆಯಾದ ಹಿನ್ನಲೆಯಲ್ಲಿ ಸರಕಾರ ಅವರ ಸೇವೆಯನ್ನು ನಿಲ್ಲಿಸಿದೆ. ಸರಕಾರ ಒಪ್ಪಿಗೆ ನೀಡಿದಲ್ಲಿ ಮುಂದಿನ ದಿನಗಳಲ್ಲಿ ಅವರನ್ನು ಪುನರ್ ನೇಮಕ ಮಾಡಿಕೊಳ್ಳಲು ಪ್ರಯತ್ನಿಸಲಾಗುವುದು ಎಂದು ಉಡುಪಿ ಜಿಲ್ಲಾ ಆರೋಗ್ಯಾಧಿಕಾರಿ ಡಾ. ನಾಗಭೂಷಣ ಉಡುಪ ಹೇಳಿದರು.

ಗಂಗೊಳ್ಳಿ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ಬುಧವಾರ ಜರಗಿದ ಬೀಳ್ಕೊಡುಗೆ ಸಮಾರಂಭದಲ್ಲಿ ಕೋವಿಡ್ ವಾರಿಯರ‍್ಸ್‌ಗಳನ್ನು ಸನ್ಮಾನಿಸಿ ಅವರು ಮಾತನಾಡಿದರು.

ಗಂಗೊಳ್ಳಿ ಗ್ರಾಮ ಪಂಚಾಯತ್ ಅಧ್ಯಕ್ಷ ಶ್ರೀನಿವಾಸ ಖಾರ್ವಿ ಅಧ್ಯಕ್ಷತೆ ವಹಿಸಿದ್ದರು. ತಾತ್ಕಾಲಿಕ ನೆಲೆಯಲ್ಲಿ ಕಾರ್ಯನಿರ್ವಹಿಸಿದ ಫಾರ್ಮಸಿಸ್ಟ್ ವಿಶ್ವನಾಥ ನಾಯಕ್, ಲ್ಯಾಬ್ ಟೆಕ್ನಿಶಿಯನ್ ಶ್ವೇತಾ, ರಶ್ಮಿತಾ ಹಾಗೂ ಕಾರ್ತಿಕ್ ಅವರನ್ನು ಗಂಗೊಳ್ಳಿ ಪ್ರಾಥಮಿಕ ಆರೋಗ್ಯ ಕೇಂದ್ರದ ಪರವಾಗಿ ಸನ್ಮಾನಿಸಿ ಬೀಳ್ಕೊಡಲಾಯಿತು.

ಗ್ರಾಪಂ ಉಪಾಧ್ಯಕ್ಷೆ ಪ್ರೇಮಾ ಸಿ.ಪೂಜಾರಿ, ಗ್ರಾಪಂ ಸದಸ್ಯ ಬಿ.ರಾಘವೇಂದ್ರ ಪೈ, ಹಿರಿಯ ಆರೋಗ್ಯ ನಿರೀಕ್ಷಕ ಸತೀಶ್ ರಾವ್, ಆರೋಗ್ಯ ಕೇಂದ್ರದ ಸಿಬ್ಬಂದಿಗಳು ಮತ್ತಿತರು ಉಪಸ್ಥಿತರಿದ್ದರು.

ಪ್ರಾಥಮಿಕ ಆರೋಗ್ಯ ಕೇಂದ್ರದ ವೈದ್ಯಾಧಿಕಾರಿ ಡಾ.ಅಮಿತಾ ಸ್ವಾಗತಿಸಿದರು. ಆರೋಗ್ಯ ಸುರಕ್ಷಾಧಿಕಾರಿ ಸುಜಾತಾ ಕಾರ್ಯಕ್ರಮ ನಿರ್ವಹಿಸಿದರು. ನರ್ಸಿಂಗ್ ಆಫೀಸರ್ ಶೋಭಾ ಕೆ. ವಂದಿಸಿದರು.

Exit mobile version