Kundapra.com ಕುಂದಾಪ್ರ ಡಾಟ್ ಕಾಂ

ಭಂಡಾರ್ಕಾರ್ಸ್ ಕಾಲೇಜು ಅಧ್ಯಾಪಕರ ಸಂಘ: ನಿವೃತ್ತರಾದ ಉಪನ್ಯಾಸಕರಿಗೆ ಸನ್ಮಾನ

ಕುಂದಾಪ್ರ ಡಾಟ್ ಕಾಂ ಸುದ್ದಿ.
ಕುಂದಾಪುರ:
ಇಲ್ಲಿನ ಭಂಡಾರ್ಕಾರ್ಸ್ ಕಾಲೇಜಿನ ಅಧ್ಯಾಪಕರ ಸಂಘದ ವಾರ್ಷಿಕ ಸ್ನೇಹಕೂಟ ಕಾರ್ಯಕ್ರಮ ಇತ್ತೀಚಿಗೆ ನಡೆಯಿತು.

ಕಾರ್ಯಕ್ರಮದಲ್ಲಿ ಕಾಲೇಜಿನಲ್ಲಿ ಸೇವೆ ಸಲ್ಲಿಸಿ ಕನ್ನಡ ವಿಭಾಗದ ಮುಖ್ಯಸ್ಥರಾಗಿ ನಿವೃತ್ತರಾದ ಡಾ. ರೇಖಾ ವಿ.ಬನ್ನಾಡಿ ಮತ್ತು ಗಣಿತಶಾಸ್ತ್ರ ವಿಭಾಗದ ಮುಖ್ಯಸ್ಥರಾಗಿ ಪ್ರೊ. ಸಂಧ್ಯಾ ಜಿ. ಕೆ ಅವರನ್ನು ಸಂಘದ ವತಿಯಿಂದ ಗೌರವಿಸಲಾಯಿತು.

ಅಧ್ಯಾಪಕರ ಸಂಘದ ಅಧ್ಯಕ್ಷರಾದ ಡಾ. ಲಲಿತಾದೇವಿ ವಹಿಸಿದ್ದರು. ಕಾಲೇಜಿನ ವಿಶ್ವಸ್ಥರಾದ ಕೆ.ಶಾಂತಾರಾಮ್ ಪ್ರಭು ನಿವೃತ್ತ ಉಪನ್ಯಾಸಕರನ್ನು ಗೌರವಿಸಿ ಮಾತನಾಡಿದರು.

ವೇದಿಕೆಯಲ್ಲಿ ಭಂಡಾರ್ಕಾರ್ಸ್ ಪದವಿ ಕಾಲೇಜಿನ ಪ್ರಾಂಶುಪಾಲರಾದ ಡಾ. ಎನ್. ಪಿ. ನಾರಾಯಣ ಶೆಟ್ಟಿ ಮತ್ತು ಭಂಡಾರ್ಕಾರ‍್ಸ್ ಪದವಿ ಪೂರ್ವ ಕಾಲೇಜಿನ ಪ್ರಾಂಶುಪಾಲರಾದ ಡಾ.ಜಿ.ಎಮ್.ಗೊಂಡ ಉಪಸ್ಥಿತರಿದ್ದರು.

ಕಾಲೇಜಿನಲ್ಲಿ ಸೇವೆ ಸಲ್ಲಿಸಿ ಉನ್ನತ ಉದ್ಯೋಗ ನಿಮಿತ್ತ ತೆರಳಿದ ಉಪನ್ಯಾಸಕರಾದ ಗುರುದಾಸ ಪ್ರಭು ಮತ್ತು ಅಮರ್ ಸಿಕ್ವೆರಾ ಅವರನ್ನು ಗೌರವಿಸಲಾಯಿತು. ಕಾಲೇಜಿನಲ್ಲಿ ಸೇವೆ ಸಲ್ಲಿಸುವುದರೊಂದಿಗೆ ಶೈಕ್ಷಣಿಕ ಮತ್ತು ಶೈಕ್ಷಣಿಕೇತರ ಕ್ಷೇತ್ರದಲ್ಲಿ ವಿವಿಧ ಸಾಧನೆ ಮಾಡಿದವರನ್ನು ಗುರುತಿಸಲಾಯಿತು. ಅಧ್ಯಾಪಕರ ಸಂಘದ ವಾರ್ಷಿಕ ಸ್ನೇಹಕೂಟ-2022 ಪ್ರಯುಕ್ತ ನಡೆದ ವಿವಿಧ ಆಟೋಟ ಸ್ಪರ್ಧೆಯಲ್ಲಿ ವಿಜೇತರಾದ ಉಪನ್ಯಾಸಕರಿಗೆ ಬಹುಮಾನ ವಿತರಿಸಲಾಯಿತು.

ಅಧ್ಯಾಪಕರ ಸಂಘದ ಉಪಾಧ್ಯಕ್ಷರಾದ ಡಾ. ಸರೋಜ ಎಮ್. ಸ್ವಾಗತಿಸಿದರು. ಅಧ್ಯಾಪಕರ ಸಂಘದ ಕಾರ್ಯದರ್ಶಿ ಪ್ರಶಾಂತ ಹೆಗ್ಡೆ ಕಾರ್ಯಕ್ರಮ ನಿರ್ವಹಿಸಿದರು. ಖಜಾಂಚಿ ದುರ್ಗಾಪ್ರಸಾದ್ ಮಯ್ಯ ವಂದಿಸಿದರು.

Exit mobile version