ಕುಂದಾಪ್ರ ಡಾಟ್ ಕಾಂ ಸುದ್ದಿ.
ಬೈಂದೂರು: ರಾಜ್ಯದಲ್ಲಿ ಸಹಕಾರಿ ಕ್ಷೇತ್ರ ಬೃಹದಾಕಾರವಾಗಿ ಬೆಳೆದಿದ್ದು, ಸರಕಾರ ಪರಿಕಲ್ಪನೆಯ ಮೂಲಕವೇ ಲಕ್ಷಾಂತರ ಮಂದಿ ಸ್ವಾವಲಂಬಿಗಳಾಗಿದ್ದಾರೆ ಎಂದು ಸಹಕಾರ ಸಚಿವ ಎಸ್. ಟಿ. ಸೋಮಶೇಖರ್ ಹೇಳಿದರು.
ಸೋಮವಾರ ದಕ್ಷಿಣ ಕನ್ನಡ ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕಿನ 110ನೇ ನೂತನ ಉಪ್ಪುಂದ ಶಾಖೆ ಉದ್ಘಾಟಿಸಿ ಈ ಮಾತನಾಡಿ ದ.ಕ ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್ ತನ್ನ ಅತ್ಯುತ್ತಮ ಕಾರ್ಯಸಾಧನೆಗಳ ಮೂಲಕ ಇತರರಿಗೂ ಮಾದರಿಯಾಗಿದೆ ಎಂದರು.
ನವೋದಯ ಸ್ವ-ಸಹಾಯ ಸಂಘಗಳ ಸಾಧನಾ ಸಮಾವೇಶ ಉದ್ಘಾಟಿಸಿದ ಬೃಹತ್ ಮತ್ತು ಮಧ್ಯಮ ಕೈಗಾರಿಕಾ ಸಚಿವ ಮುರುಗೇಶ್ ಆರ್. ನಿರಾಣಿ ಅವರು ಮಾತನಾಡಿ ರಾಜ್ಯ ಸರಕಾರ ರೈತರ ಅಭಿವೃದ್ಧಿಯ ಜೊತೆಗೆ ರೈತ್ಯೋದ್ಯಮದ ಬಗ್ಗೆ ಹಲವು ಮಹತ್ತರ ಯೋಜನೆಗಳನ್ನು ಜಾರಿಗೆ ತರುವ ಚಿಂತನೆಯಲ್ಲಿದೆ. ನವೋದಯ ಸ್ವ-ಸಹಾಯ ಸಂಘಗಳು ಹಲವರ ಬದುಕಿಗೆ ಬೆಳಕಾಗಿದೆ. ಕೃಷಿಕರ ಮತ್ತು ಮಹಿಳೆಯರಿಗೆ ಸ್ವಾವಲಂಬನೆಯ ಜೀವನ ನೀಡಿದೆ ಎಂದರು.
ಹೊಸ ಸ್ವ-ಸಹಾಯ ಗುಂಪುಗಳನ್ನು ಉದ್ಘಾಟಿಸಿದ ಕೃಷಿ ಸಚಿವ ಬಿ. ಸಿ ಪಾಟೀಲ್ ಮಾತನಾಡಿ ಕೃಷಿ ಸಹಕಾರಿ ಮತ್ತು ಉದ್ಯಮ ಒಂದಕ್ಕೊಂದು ಬೆಸೆದುಕೊಂಡಿದೆ. ರಾಜ್ಯದಲ್ಲಿ ಕಿಸಾನ್ ಸನ್ಮಾನ್ ಯೋಜನೆ ಯಶಸ್ವಿಯಾಗಿ ಅನುಷ್ಠಾನಗೊಂಡಿದೆ. 5 ಎಕರೆಗಿಂತ ಕಡಿಮೆ ಭೂಮಿ ಇರುವ ಸಣ್ಣ ರೈತರ ಟ್ರ್ಯಾಕ್ಟರ್’ಗಳಿಗೆ ರಾಜ್ಯ ಸರಕಾರ ಒಟ್ಟು 1,250ರೂ ಪ್ರೋತ್ಸಾಹಧನ ನೀಡಲು ನಿರ್ಧರಿಸಿದೆ ಎಂದರು.
ದ.ಕ ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್ ಅಧ್ಯಕ್ಷ ಡಾ. ಎಂ. ಎನ್. ರಾಜೇಂದ್ರ ಕುಮಾರ್ ಅಧ್ಯಕ್ಷತೆ ವಹಿಸಿ ಮಾತನಾಡಿ, ನವೋದಯ ಸ್ವಸಹಾಯ ಸಂಘದ ಮೂಲಕ ಉಭಯ ಜಿಲ್ಲೆಗಳ ಮಹಿಳೆಯರಿಗೆ ಸ್ವಾವಲಂಭಿ ಬದುಕಿಗೆ ದಾರಿ ತೋರಲಾಗಿದೆ. ಸರಕಾರದ ಯೋಜನೆಗಳನ್ನು ಸಮರ್ಪಕವಾಗಿ ರೈತರ ಮನೆ ಬಾಗಿಲಿಗೆ ತಲುಪಿಸಲಾಗಿದೆ.ನವೋದಯದ ಸಾಧನೆ ರಾಷ್ಟ್ರಕ್ಕೆ ಮಾದರಿಯಾಗಿದೆ ಎಂದ ಅವರು ಉಪ್ಪುಂದ ಶಾಖೆಗೆ ಆರಂಭದಲ್ಲಿಯೇ 26 ಕೋಟಿ ಠೇವಣಿ ಸಂಗ್ರಹವಾಗಿದೆ ಎಂದರು.
ಹಿಂದುಳಿದ ವರ್ಗಗಳ ಯೋಜನಾ ಆಯೋಗದ ಅಧ್ಯಕ್ಷ ಕೆ. ಜಯಪ್ರಕಾಶ ಹೆಗ್ಡೆ ಗಣಕೀರಣ ಉದ್ಘಾಟಿಸಿದರು. ಬೈಂದೂರು ಶಾಸಕ ಬಿ.ಎಮ್.ಸುಕುಮಾರ ಶೆಟ್ಟಿ ಭದ್ರತಾಕೋಶ ಉದ್ಘಾಟಿಸಿದರು. ವಿಧಾನಪರಿಷತ್ ಸದಸ್ಯ ಮಂಜುನಾಥ ಭಂಡಾರಿ ವಾಹನ ಸಾಲ ಪತ್ರ ವಿತರಿಸಿದರು. ಮಾಜಿ ಶಾಸಕ ಕೆ. ಗೋಪಾಲ ಪೂಜಾರಿ ಲಾಕರ್ ಕೀ ಹಸ್ತಾಂತರಿಸಿದರು.
ಉಡುಪಿ ಜಿಲ್ಲಾ ಸಹಕಾರಿ ಯೂನಿಯನ್ ಅಧ್ಯಕ್ಷ ಜಯಕರ ಶೆಟ್ಟಿ ಇಂದ್ರಾಳಿ, ದ.ಕ ಮತ್ತು ಉಡುಪಿ ಜಿಲ್ಲಾ ಸಹಕಾರಿ ಮೀನು ಮಾರಾಟ ಫೆಡರೇಶನ್ ಅಧ್ಯಕ್ಷ ಯಶಪಾಲ್ ಎ. ಸುವರ್ಣ, ಉಪ್ಪುಂದ ಗ್ರಾ.ಪಂ ಅಧ್ಯಕ್ಷೆ ಲಕ್ಷ್ಮಿಖಾರ್ವಿ, ಕಟ್ಟಡದ ಮಾಲಕ ಹಿರಿಯಣ್ಣ ಶೆಟ್ಟಿ, ಉಪಾಧ್ಯಕ್ಷ ವಿನಯ ಕುಮಾರ್ ಸೂರಿಂಜೆ, ಪ್ರಭಾರ ಮುಖ್ಯ ಕಾರ್ಯನಿರ್ವಹಣಾಧಿಕಾರಿ ರವೀಂದ್ರ ಬಿ., ಶಾಖಾ ವ್ಯವಸ್ಥಾಪಕ ಶಂಕರ ಶೆಟ್ಟಿ, ನಿರ್ದೇಶಕರಾದ ಬಿ. ನಿರಂಜನ್, ಟಿ.ಜಿ.ರಾಜಾರಾಮ್ ಭಟ್, ಭಾಸ್ಕರ ಎಸ್, ಕೋಟ್ಯಾನ್, ಎಂ.ವಾದಿರಾಜ ಶೆಟ್ಟಿ,ಶಶಿಕುಮಾರ್ ರೈ.ಬಿ, ಎಸ್.ಬಿ.ಜಯರಾಮ ರೈ, ಐಕಳಬಾವ ದೇವಿಪ್ರಸಾದ ಶೆಟ್ಟಿ ಬೆಳಪು,ಮೋನಪ್ಪ ಶೆಟ್ಟಿ ಎಕ್ಕಾರು, ಕೆ.ಹರಿಶ್ಚಂದ್ರ,ಕೆ.ಜೈರಾಜ್ ಬಿ.ರೈ, ಬಿ.ಅಶೋಕ ಕುಮಾರ್ ಶೆಟ್ಟಿ,ರಾಜೇಶ್ ರಾವ್, ಸದಾಶಿವ ಉಳ್ಳಾಲ್, ಸಹಕಾರಿ ಸಂಘಗಳ ಉಪನಿಬಂಧಕ ಪ್ರವೀಣ ಬಿ. ನಾಯಕ್ ಉಪಸ್ಥಿತರಿದ್ದರು.
ದ.ಕ.ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್ ನಿರ್ದೇಶಕ ಎಸ್. ರಾಜು ಪೂಜಾರಿ ಸ್ವಾಗತಿಸಿ, ಪ್ರಾಸ್ತಾವಿಕ ಮಾತುಗಳನ್ನಾಡಿದರು. ನಿರ್ದೇಶಕರಾದ ಮೊಳವಳ್ಳಿ ಮಹೇಶ್ ಹೆಗ್ಡೆ ಧನ್ಯವಾದಗೈದರು. ಪತ್ರಕರ್ತರಾದ ಕೆ. ಸಿ ರಾಜೇಶ್, ಸುಬ್ರಹ್ಮಣ್ಯ ಪಡುಕೋಣೆ ಕಾರ್ಯಕ್ರಮ ನಿರ್ವಹಿಸಿದರು.