Site icon Kundapra.com ಕುಂದಾಪ್ರ ಡಾಟ್ ಕಾಂ

ಉಡುಪಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ: ಜವಾನ ಹುದ್ದೆಗೆ ಅರ್ಜಿ ಆಹ್ವಾನ

ಕುಂದಾಪ್ರ ಡಾಟ್ ಕಾಂ ಸುದ್ದಿ.
ಉಡುಪಿ,ಏ.7:
ಉಡುಪಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯದ ಘಟಕದಲ್ಲಿ ಖಾಲಿ ಇರುವ ಒಟ್ಟು 17 ಜವಾನ ಹುದ್ದೆಗಳಿಗೆ ಅರ್ಹ ಅಭ್ಯರ್ಥಿಗಳಿಂದ ಆನ್ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ.

ಕರ್ನಾಟಕ ಪ್ರೌಢ ಶಿಕ್ಷಣ ಪರೀಕ್ಷಾ ಮಂಡಳಿ ನಡೆಸುವ ಎಸ್.ಎಸ್.ಎಲ್.ಸಿ ಪರೀಕ್ಷೆ ಅಥವಾ ತತ್ಸಮಾನ ಪರೀಕ್ಷೆಯಲ್ಲಿ ಉತ್ತೀರ್ಣರಾಗಿರುವ, ಕನ್ನಡ ಭಾಷೆ ಓದಲು, ಬರೆಯಲು ತಿಳಿದಿರುವ ಹಾಗೂ ಲಘು ವಾಹನ ಚಾಲನಾ ಲೈಸನ್ಸ್ ಹೊಂದಿರುವ ಅರ್ಹ ಅಭ್ಯರ್ಥಿಗಳು ಮೇ 5 ರ ಒಳಗೆ ಅರ್ಜಿ ಸಲ್ಲಿಸಬಹುದಾಗಿದೆ.

ಶುಲ್ಕವನ್ನು ಚಲನ್ ಮೂಲಕ ಪಾವತಿಸಲು ಮೇ 7 ಕೊನೆಯ ದಿನವಾಗಿದ್ದು, ಅರ್ಜಿ ನಮೂನೆ ಹಾಗೂ ಹೆಚ್ಚಿನ ಮಾಹಿತಿಗಾಗಿ ಜಿಲ್ಲಾ ನ್ಯಾಯಾಲಯದ ವೆಬ್ಸೈಟ್ https://districts.ecourts.gov.in/udupi-onlinerecruitment ಅಥವಾ ಜಿಲ್ಲಾ ನ್ಯಾಯಾಧೀಶರ ಕಚೇರಿಯನ್ನು ಸಂಪರ್ಕಿಸುವಂತೆ ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶರ ಕಚೇರಿ ಪ್ರಕಟಣೆ ತಿಳಿಸಿದೆ.

Exit mobile version