ಕುಂದಾಪ್ರ ಡಾಟ್ ಕಾಂ ಸುದ್ದಿ.
ಉಡುಪಿ,ಏ.6: ಜಿಲ್ಲಾ ಪ್ರಾದೇಶಿಕ ಸಾರಿಗೆ ಪ್ರಾಧಿಕಾರದ ನಿರ್ಣಯದಂತೆ ಉಡುಪಿ ಮತ್ತು ಕುಂದಾಪುರ ತಾಲೂಕಿನ ಆಟೋರಿಕ್ಷಾ ಚಾಲಕ ಹಾಗೂ ಮಾಲಕರು ಆಟೋರಿಕ್ಷಾಗಳಿಗೆ ಕಡ್ಡಾಯವಾಗಿ ವಲಯ ಸ್ಟಿಕ್ಕರ್ಗಳನ್ನು ಅಳವಡಿಸಿಕೊಳ್ಳುವಂತೆ ಈಗಾಗಲೇ ಹಲವು ಬಾರಿ ಸೂಚನೆ ನೀಡಲಾಗಿದ್ದು, ವಲಯ ಸ್ಟಿಕ್ಕರ್ ಅಳವಡಿಸಲು ಬಾಕಿ ಇರುವ ಆಟೋರಿಕ್ಷಾ ಮಾಲಕರು ವಾಹನದ ಮೂಲ ದಾಖಲೆಗಳೊಂದಿಗೆ ಕಚೇರಿಗೆ ಹಾಜರಾಗಿ ಕೂಡಲೇ ವಲಯ ಸ್ಟಿಕ್ಕರ್ಗಳನ್ನು ಅಳವಡಿಸಿಕೊಳ್ಳಬೇಕು. ತಪ್ಪಿದ್ದಲ್ಲಿ ದಂಡ ವಿಧಿಸಿ, ಕಠಿಣ ಕಾನೂನು ಕ್ರಮ ಕೈಗೊಂಡು, ಮಾಹಿತಿಯನ್ನು ಉಚ್ಛ ನ್ಯಾಯಾಲಯಕ್ಕೆ ಸಲ್ಲಿಸಲಾಗುವುದು ಎಂದು ಜಿಲ್ಲಾ ಪ್ರಾದೇಶಿಕ ಸಾರಿಗೆ ಅಧಿಕಾರಿಗಳ ಪ್ರಕಟಣೆ ತಿಳಿಸಿದೆ.