Kundapra.com ಕುಂದಾಪ್ರ ಡಾಟ್ ಕಾಂ

ವಿಶ್ವ ವಿನಾಯಕ ಸಿಬಿಎಸ್ಇ ಸ್ಕೂಲ್: ಸನ್ಮಾನ ಹಾಗೂ ಬಹುಮಾನ ವಿತರಣಾ ಕಾರ್ಯಕ್ರಮ

ಕುಂದಾಪ್ರ ಡಾಟ್ ಕಾಂ ಸುದ್ದಿ.
ಕುಂದಾಪುರ:
ತೆಕ್ಕಟ್ಟೆ, ವಿಶ್ವ ವಿನಾಯಕ ಸಿ.ಬಿ.ಎಸ್.ಇ ಸ್ಕೂಲ್‌ನಲ್ಲಿ ಆಯೋಜಿಸಲಾದ ಕಾರ್ಯಕ್ರಮದಲ್ಲಿ ಎನ್‌ಟಿಎಸ್‌ಇ ಪರೀಕ್ಷೆಯಲ್ಲಿ ಉತ್ತೀರ್ಣಳಾದ ಹತ್ತನೇ ತರಗತಿ ವಿದ್ಯಾರ್ಥಿನಿ ಪ್ರಣಮ್ಯಳಿಗೆ ಸನ್ಮಾನ ಹಾಗೂ ಶಾಲಾ ವಿದ್ಯಾರ್ಥಿಗಳಿಗೆ ಬಹುಮಾನ ವಿತರಣೆ ಮಾಡಲಾಯಿತು.

ಮುಖ್ಯ ಅತಿಥಿಯಾಗಿದ್ದ ನಿವೃತ್ತ ಉಪನ್ಯಾಸಕಿ ಡಾ. ಪಾರ್ವತಿ ಜಿ. ಐತಾಳ್ ಅವರು ಸನ್ಮಾನ ಹಾಗೂ ಬಹುಮಾನ ವಿತರಣಾ ಮಾಡಿದ ಬಳಿಕ ಮಾತನಾಡಿ ವಿದ್ಯಾರ್ಥಿ ದೆಸೆಯಲ್ಲಿ ತಮ್ಮನ್ನು ತಾವು ಪರಿಪಕ್ವಗೊಳಿಸಲು ಸಾಹಿತ್ಯ, ಕಲೆ ಹಾಗೂ ಓದಿನ ಕಡೆಗೆ ಗಮನ ಹರಿಸಿ ಸಾಧನೆಯನ್ನು ಮಾಡಬೇಕು ಎಂದು ಹೇಳಿದರು.

ಶಾಲೆಯ ಮೇನೇಜಿಂಗ್ ಡೈರೆಕ್ಟರ್ ಎಮ್ ಪ್ರಭಾಕರ ಶೆಟ್ಟಿಯವರು ಮಾತನಾಡಿ ಎಲ್ಲ ವಿದ್ಯಾರ್ಥಿಗಳು ಈ ಸನ್ಮಾನ ಕಾರ‍್ಯಕ್ರಮದಿಂದ ಪ್ರೇರಿತರಾಗಿ ಇನ್ನಷ್ಟು ಪ್ರತಿಭೆಗಳು ಹೊರಬರಲು ಸ್ಫೂರ್ತಿಯಾಗಲಿ ಎಂದರು.

ಶಾಲಾ ಪ್ರಾಂಶುಪಾಲರಾದ ನಿತಿನ್ ಡಿ’ಆಲ್ಮೇಡಾ ಉಪಸ್ಥಿತರಿದ್ದರು. ಪ್ರೀಯಾ ಜೇಮ್ಸ್ ಸ್ವಾಗತಿಸಿದರು, ರವೀಂದ್ರ ಕಾರ್ಕಡ ಸನ್ಮಾನ ಪತ್ರ ವಾಚಿಸಿದರು, ಹಾಗೂ ದೀಕ್ಷಾ ಕೊಟ್ಯಾನ್ ಕಾರ‍್ಯಕ್ರಮ ನಿರೂಪಿಸಿದರು.

Exit mobile version