Kundapra.com ಕುಂದಾಪ್ರ ಡಾಟ್ ಕಾಂ

ಗುರುಕುಲದಲ್ಲಿ ಚಿಲಿಪಿಲಿ ಬೇಸಿಗೆ ಶಿಬಿರದ ಉದ್ಘಾಟನೆ

ಕುಂದಾಪ್ರ ಡಾಟ್ ಕಾಂ ಸುದ್ದಿ.
ಕುಂದಾಪುರ:
ವಕ್ವಾಡಿಯಲ್ಲಿ ಗುರುಕುಲ ವಿದ್ಯಾಸಂಸ್ಥೆ ಆಯೋಜಿಸಿದ್ದ ಚಿಲಿಪಿಲಿ ಬೇಸಿಗೆ ಶಿಬಿರದ ಇತ್ತಿಚಿಗೆ ಉದ್ಘಾಟನೆಗೊಂಡಿತು.

ಬೆಂಗಳೂರು ಕಪೆಲ್ಲಾ- ದ ಸೌಂಡ್ ಸಂಸ್ಥಾಪಕರು ಮೈಥಿಲಿ ಉದ್ಘಾಟಿಸಿ ಮಾತನಾಡಿ ಬೇಸಿಗೆ ಶಿಬಿರವು ಮಕ್ಕಳಲ್ಲಿ ಅಡಗಿರುವ ಸುಪ್ತ ಪ್ರತಿಭೆಗಳನ್ನು ಹೊರತರಲು ಸಹಾಯವಾಗುವುದು, ಜೊತೆಗೆ ಮಕ್ಕಳು ಮಾನಸಿಕವಾಗಿ ಮತ್ತು ದೈಹಿಕವಾಗಿ ಇದರಲ್ಲಿ ತಮ್ಮನ್ನು ತೊಡಗಿಸಿಕೊಳ್ಳುವುದರಿಂದ ಅವರ ಸ್ವತಂತ್ರ ಕಲಿಕೆಗೆ ಇದು ಸಹಾಯವಾಗುತ್ತದೆ ಎಂದು ತಿಳಿಸಿದರು.

ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ಬಾಂಡ್ಯ ಎಜುಕೇಶನಲ್ ಟ್ರಸ್ಟ ನ ಜಂಟಿ ಕಾರ್ಯನಿರ್ವಾಹಕಿ ಅನುಪಮ .ಎಸ್ ಶೆಟ್ಟಿ ಮಾತನಾಡಿ ಮಕ್ಕಳ ರಜಾಕ್ಕೊಂದು ಮಜಾ ನೀಡುವುದರ ಜೊತೆಗೆ ಹೊಸ ವಿಷಯಗಳ ಕಲಿಕೆಗೆ ಅವಕಾಶ ನೀಡುವ ಉದ್ದೇಶದಿಂದ ನಮ್ಮ ಸಂಸ್ಥೆಯಲ್ಲಿ ಈ ಶಿಬಿರವನ್ನು ಆಯೋಜಿಸಿದ್ದು ಇದರ ಸದುಪಯೋಗವನ್ನು ಎಲ್ಲರೂ ಪಡೆದುಕೊಳ್ಳಿ ಎಂದು ವಿದ್ಯಾರ್ಥಿಗಳಿಗೆ ತಿಳಿಸಿದರು.

ಈ ಸಂದರ್ಭದಲ್ಲಿ ಶಾಲಾ ಪ್ರಾಂಶುಪಾಲರಾದ ಮೋಹನ್. ಕೆ, ಕಾಲೇಜು ಪ್ರಾಂಶುಪಾಲರಾದ ಅರುಣ್ ಡಿಸಿಲ್ವಾ, ಶಿಬಿರದ ಇನ್ನೋರ್ವ ಮಾರ್ಗದರ್ಶಕಿ ಸಂಧ್ಯಾ, ಶಿಕ್ಷಕರು, ಪೋಷಕರು ಮತ್ತು ವಿದ್ಯಾರ್ಥಿಗಳು ಉಪಸ್ಥಿತರಿದ್ದರು.

Exit mobile version