Site icon Kundapra.com ಕುಂದಾಪ್ರ ಡಾಟ್ ಕಾಂ

ಎಂಬಿಎ ಪರೀಕ್ಷೆ: ಶ್ವೇತಾ ಪೂಜಾರಿಗೆ ಚಿನ್ನದ ಪದಕ

ಕುಂದಾಪ್ರ ಡಾಟ್ ಕಾಂ ಸುದ್ದಿ.
ಕುಂದಾಪುರ:
ಬೆಂಗಳೂರಿನ ಇಂಟರ್ ನ್ಯಾಷನಲ್ ಸ್ಕೂಲ್ ಆಫ್ ಬಿಸಿನೆಸ್ ಅಂಡ್ ರಿಸರ್ಚ್ ವಿದ್ಯಾರ್ಥಿನಿ ಶ್ವೇತಾ ಪೂಜಾರಿ ಬೆಂಗಳೂರು ವಿಶ್ವವಿದ್ಯಾನಿಲಯದ 2019- 21ರ ಎಂಬಿಎ ಪರೀಕ್ಷೆಯ ಮಾರ್ಕೆಟಿಂಗ್ ಮತ್ತು ಫೈನಾನ್ಸ್ ವಿಭಾಗದ ಪರೀಕ್ಷೆಯಲ್ಲಿ ಕಾಲೇಜಿಗೆ ಅತ್ಯಧಿಕ ಅಂಕ ಗಳಿಸುವ ಮೂಲಕ ಚಿನ್ನದ ಪದಕವನ್ನು ಗಳಿಸಿರುತ್ತಾರೆ.

ಶ್ವೇತಾ ಐ.ಎಸ್.ಬಿ.ಆರ್ ಕಾಲೇಜಿನ ಜೆಮ್ಸ್ ಮತ್ತು ಶ್ರೀಮತಿ ರಸಿಲಾ ಕೊಠಾರಿ ಪುರಸ್ಕಾರವನ್ನು ಸಹ ಪಡೆದುಕೊಂಡಿದ್ದಾರೆ. ಐಸಿಐಸಿಐ ಬ್ಯಾಂಕ್ ಇನ್ಫೋಸಿಸ್ ಬ್ರಾಂಚನಲ್ಲಿ ಉದ್ಯೋಗಿಯಾಗಿರುವ ಇವರು ಕೊಡಪಾಡಿ ಹೊಸ್ಮನೆಯ ಮಹಾಬಲ ಪೂಜಾರಿ ಮತ್ತು ಸುಶೀಲ ಪೂಜಾರಿಯವರ ಪುತ್ರಿ.

Exit mobile version