ಕುಂದಾಪ್ರ ಡಾಟ್ ಕಾಂ ಸುದ್ದಿ.
ಗಂಗೊಳ್ಳಿ: ಶ್ರೀ ಜಟ್ಟಿಗೇಶ್ವರ ಯುತ್ ಕ್ಲಬ್ ಲೈಟ್‌ಹೌಸ್ ಗಂಗೊಳ್ಳಿ ಇದರ ೩೧ನೇ ವಾರ್ಷಿಕೋತ್ಸವ ಸಮಾರಂಭ ಗಂಗೊಳ್ಳಿ ಲೈಟ್‌ಹೌಸ್ ಸಮೀಪದ ಶ್ರೀ ಜಟ್ಟಿಗೇಶ್ವರ ದೇವಸ್ಥಾನದ ವಠಾರದಲ್ಲಿ ಶುಕ್ರವಾರ ನಡೆಯಿತು.
ಬಿಜೆಪಿ ಬೈಂದೂರು ಮಂಡಲ ಅಧ್ಯಕ್ಷ ದೀಪಕ ಕುಮಾರ್ ಶೆಟ್ಟಿ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು. ಬಳ್ಳಾರಿಯ ಉದ್ಯಮಿ ಪದ್ಮನಾಭ ವಿ.ಕೊತ್ವಾಲ್, ಭಟ್ಕಳ ಅರ್ಬನ್ ಕೋ-ಆಪರೇಟಿವ್ ಬ್ಯಾಂಕ್ ನಿರ್ದೇಶಕ ತುಳಸಿದಾಸ್ ಮೊಗೇರ, ಉದ್ಯಮಿ ಉಮೇಶ ಎಲ್. ಮೇಸ್ತ ಗುಜ್ಜಾಡಿ, ಗಂಗೊಳ್ಳಿ ಪ್ರಾಥಮಿಕ ಮೀನುಗಾರರ ಸಹಕಾರಿ ಸಂಘದ ಅಧ್ಯಕ್ಷ ಸದಾಶಿವ ಖಾರ್ವಿ ಕಂಚುಗೋಡು, ಬಿಜೆಪಿ ಹಿಂದುಳಿದ ವರ್ಗಗಳ ರಾಜ್ಯ ಕಾರ್ಯಕಾರಿಣಿ ಸದಸ್ಯ ನಾಗರಾಜ ಖಾರ್ವಿ ಶುಭಾಶಂಸನೆಗೈದರು. ಅಂತರಾಷ್ಟ್ರೀಯ ಕ್ರೀಡಾಪಟು ಅರುಣಕಲಾ ಎಸ್. ರಾವ್ ಅವರನ್ನು ಈ ಸಂದರ್ಭ ಸನ್ಮಾನಿಸಿ ಗೌರವಿಸಲಾಯಿತು.
ಸಂಘದ ಅಧ್ಯಕ್ಷ ಬಿ.ನಾಗರಾಜ ಖಾರ್ವಿ ಸ್ವಾಗತಿಸಿದರು. ಕಾರ್ಯದರ್ಶಿ ಕೇಶವ ಖಾರ್ವಿ ವರದಿ ವಾಚಿಸಿದರು. ನಾಗರಾಜ ಬಿ. ಎನ್. ಸನ್ಮಾನಿತರನ್ನು ಪರಿಚಯಿಸಿದರು. ವಿಶ್ವನಾಥ ಮೊಗವೀರ ಬಹುಮಾನ ವಿಜೇತರ ಪಟ್ಟಿ ವಾಚಿಸಿದರು. ಸುಂದರ ಜಿ. ಕಾರ್ಯಕ್ರಮ ನಿರ್ವಹಿಸಿದರು. ಮಡಿ ವಿಶ್ವನಾಥ ಖಾರ್ವಿ ವಂದಿಸಿದರು.

