Kundapra.com ಕುಂದಾಪ್ರ ಡಾಟ್ ಕಾಂ

ಬಾಲನಟಿ ಶ್ಲಾಘಾ ಸಾಲಿಗ್ರಾಮಗೆ ಅತ್ಯುತ್ತಮ ಬಾಲನಟಿ ಪ್ರಶಸ್ತಿ ಪ್ರದಾನ

ಕುಂದಾಪ್ರ ಡಾಟ್ ಕಾಂ ಸುದ್ದಿ.
ಕುಂದಾಪುರ:
ತೆಕ್ಕಟ್ಟೆ ವಿಶ್ವ ವಿನಾಯಕ ಸಿಬಿ.ಎಸ್‌ಇ ಸ್ಕೂಲ್ ವಿದ್ಯಾರ್ಥಿ ಶ್ಲಾಘಾ ಸಾಲಿಗ್ರಾಮ ಅವರ ಕಟಕ ಚಿತ್ರದ ಅಭಿನಯಕ್ಕಾಗಿ ಅತ್ಯುತ್ತಮ ಬಾಲನಟಿ ಪ್ರಶಸ್ತಿಗೆ ಆಯ್ಕೆಯಾಗಿದ್ದು, ಇತ್ತಿಚಿಗೆ ಬೆಂಗಳೂರಿನಲ್ಲಿ ನಡೆದ ಸಮಾರಂಭದಲ್ಲಿ ಪ್ರಶಸ್ತಿ ಪ್ರದಾನ ಮಾಡಲಾಯಿತು.

ಬೆಂಗಳೂರು ರವೀಂದ್ರ ಕಲಾಕ್ಷೇತ್ರದಲ್ಲಿ ನಡೆದ ರಾಜ್ಯ ಚಲನಚಿತ್ರ ಪ್ರಶಸ್ತಿ ಪ್ರದಾನ ಕಾರ್ಯಕ್ರಮದಲ್ಲಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ನಗದು ಪ್ರಶಸ್ತಿ ಹಾಗೂ ಪ್ರಮಾಣ ಪತ್ರವನ್ನು ನೀಡಿ ಗೌರವಿಸಿದರು.

ರಾಘವೇಂದ್ರ ಆಚಾರ್ ಮಾಲಾ ದಂಪತಿಗಳ ಪುತ್ರಿಯಾದ ಶ್ಲಾಘಾ, ಪ್ರಸ್ತುತ ವಿಶ್ವ ವಿನಾಯಕ ಸಿ.ಬಿ.ಎಸ್.ಇ. ಸ್ಕೂಲ್‌ನಲ್ಲಿ 6 ನೇ ತರಗತಿಯಲ್ಲಿ ವ್ಯಾಸಂಗ ಮಾಡುತ್ತಿದ್ದಾಳೆ. ಕಟಕ, ಗಿರ್ಮಿಟ್ ಮೊದಲಾದ ಸಿನಿಮಾದಲ್ಲಿ ನಟಿಸಿದ್ದಾರೆ.

Exit mobile version