Site icon Kundapra.com ಕುಂದಾಪ್ರ ಡಾಟ್ ಕಾಂ

ಕುಂದಾಪುರ ತಾಲೂಕು ಯುವ ಬಂಟರ ಸಂಘದ ಅಧ್ಯಕ್ಷರಾಗಿ ಡಾ. ಅಂಪಾರು ನಿತ್ಯಾನಂದ ಶೆಟ್ಟಿ ಆಯ್ಕೆ

ಕುಂದಾಪ್ರ ಡಾಟ್ ಕಾಂ ಸುದ್ದಿ.
ಕುಂದಾಪುರ:
ತಾಲೂಕು ಯುವ ಬಂಟರ ಸಂಘ ದಶಮಾನೋತ್ಸವ ವರ್ಷ ಅಧ್ಯಕ್ಷರಾಗಿ ಉಡುಪಿ ಮಿಲಾಗ್ರಿಸ್ ಕಾಲೇಜ್ ಸಹಾಯಕ ಪ್ರಾಧ್ಯಾಪಕ ಡಾ. ಅಂಪಾರು ನಿತ್ಯಾನಂದ ಶೆಟ್ಟಿ ಆಯ್ಕೆಯಾಗಿದ್ದಾರೆ.

ಯುವ ಬಂಟರ ಸಂಘದ ಸ್ಥಾಪಕಾಧ್ಯಕ್ಷರಾಗಿ, ಗೌರವಾಧ್ಯಕ್ಷರಾಗಿ, ಜಾಗತಿಕ ಬಂಟರ ಸಂಘಗಳ ಒಕ್ಕೂಟ ಗವರ್ನಿಂಗ್ ಕೌನ್ಸಿಲ್ ಸದಸ್ಯರಾಗಿ, ಬಂಟರ ಯಾನೆ ನಾಡವರ ಮಾತೃ ಸಂಘ ಕುಂದಾಪುರ ತಾಲೂಕು ಸಮಿತಿಯ ನಾಮನಿರ್ದೇಶಿತ ಸದಸ್ಯರಾಗಿ, ವಿಶ್ವ ಬಂಟರ ಸಮ್ಮೇಳನ ೨೦೧೯ ರ ಉಡುಪಿ ಜಿಲ್ಲೆಯ ಸಲಹಾ ಸಮಿತಿ ಸದಸ್ಯರಾಗಿ, ಶ್ರೀ ರಾಮಕೃಷ್ಣ ಕ್ರೆಡಿಟ್ ಕೋ-ಆಪರೇಟಿವ್ ಸೊಸೈಟಿ ಕುಂದಾಪುರ ಶಾಖೆಯ ಸಲಹಾ ಸಮಿತಿ ಸದಸ್ಯರಾಗಿಯೂ ಕಾರ್ಯನಿರ್ವಹಿಸಿರುತ್ತಾರೆ.

ಪ್ರಧಾನ ಕಾರ್ಯದರ್ಶಿಯಾಗಿ ಉದ್ಯಮಿ ನಿತೀಶ್ ಶೆಟ್ಟಿ ಬಸ್ರೂರು, ಕೋಶಾಧಿಕಾರಿಯಾಗಿ ಉಪನ್ಯಾಸಕ ಅಕ್ಷಯ್ ಹೆಗ್ಡೆ ಮೊಳಹಳ್ಳಿ ಆಯ್ಕೆಯಾಗಿರುವ ಬಗ್ಗೆ ಕುಂದಾಪುರ ತಾಲೂಕು ಯುವ ಬಂಟರ ಸಂಘದ ಗೌರವಾಧ್ಯಕ್ಷ ಡಾ. ರಂಜನ್ ಶೆಟ್ಟಿ ಹಾಗೂ ಸಂಘದ ಹಾಲಿ ಅಧ್ಯಕ್ಷ ಸುನಿಲ್ ಶೆಟ್ಟಿ ಹೇರಿಕುದ್ರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Exit mobile version