Kundapra.com ಕುಂದಾಪ್ರ ಡಾಟ್ ಕಾಂ

ಶಿರೂರು ದಾಸನಾಡಿ ಶ್ರೀ ವೆಂಕಟರಮಣ ದೇವಸ್ಥಾನಕ್ಕೆ ಸಂಸದರ ಭೇಟಿ

ಕುಂದಾಪ್ರ ಡಾಟ್ ಕಾಂ ಸುದ್ದಿ.
ಬೈಂದೂರು:
ತಾಲೂಕಿನ ಶಿರೂರು ದಾಸನಾಡಿಯ ಶ್ರೀ ವೆಂಕಟರಮಣ ದೇವಸ್ಥಾನದ ತಾಮ್ರಚ್ಚಾದಿತ ನೂತನ ಶಿಖರ ಪ್ರತಿಷ್ಠೆ, ನೂತನ ಶಿಲಾಮಯ ಹೆಬ್ಬಾಗಿಲು, ಶಿಲಾಮಯ ಪೌಳಿ ಲೋಕಾರ್ಪಣೆ ಕಾರ್ಯಕ್ರಮದ ಅಂಗವಾಗಿ ಸಂಸದ ಬಿ.ವೈ ರಾಘವೇಂದ್ರ ಅವರು ಬುಧವಾರ ದೇವಸ್ಥಾನಕ್ಕೆ ಭೇಟಿ ನೀಡಿದರು.

ಈ ಸಂದರ್ಭ ದರ್ಶನವನ್ನು ಪಡೆದು ವಿಶೇಷ ಪೂಜೆಯನ್ನು ಸಲ್ಲಿಸಿದರು. ಸಂಸದ,  ಶಾಸಕರನ್ನು ದೇವಳದ ವತಿಯಿಂದ ಗೌರವಿಸಲಾಯಿತು. ಶಾಸಕರಾದ ಬಿ. ಎಂ ಸುಕುಮಾರ್ ಶೆಟ್ಟಿ, ದೇವಳ ಜೀರ್ಣೋದ್ದಾರ ಸಮಿತಿ ಅಧ್ಯಕ್ಷ ರವೀಂದ್ರ ಶೆಟ್ಟಿ ಹೊಸ್ಮನೆ, ಆಡಳಿತ ಮೊಕ್ತೇಸರ ನಾಗಯ್ಯ ಶೆಟ್ಟಿ ಹೊಸ್ಮನೆ, ಉತ್ಸವ ಸಮಿತಿ ಅಧ್ಯಕ್ಷ ಪುಪ್ಪರಾಜ ಶೆಟ್ಟಿ, ಕಾರ್ಯದರ್ಶಿ ಮಾದವ ಬಿಲ್ಲವ, ಅರ್ಚಕ ರವೀಂದ್ರ ಅಯ್ಯಂಗಾರ್ ಮೊದಲಾದವರು ಉಪಸ್ಥಿತರಿದ್ದರು.

Exit mobile version