Kundapra.com ಕುಂದಾಪ್ರ ಡಾಟ್ ಕಾಂ

ಜಿಲ್ಲಾ ಮಟ್ಟದ ಬಾಲ್ ಬ್ಯಾಡ್ಮಿಂಟನ್ ಸರಸ್ವತಿ ವಿದ್ಯಾಲಯ ರನ್ನರ್ ಅಪ್

ಗಂಗೊಳ್ಳಿ: ಇತ್ತೀಚೆಗೆ ಗಂಗೊಳ್ಳಿಯಲ್ಲಿ ಪದವಿಪೂರ್ವ ಶಿಕ್ಷಣ ಇಲಾಖೆ ಉಡುಪಿ ಮತ್ತು ಸರಸ್ವತಿ ವಿದ್ಯಾಲಯ ಪದವಿಪೂರ್ವ ಕಾಲೇಜು ಗಂಗೊಳ್ಳಿ ಇವರ ಜಂಟಿ ಆಶ್ರಯದಲ್ಲಿ ನಡೆದ ಉಡುಪಿ ಜಿಲ್ಲಾ ಮಟ್ಟದ ಪದವಿಪೂರ್ವ ಕಾಲೇಜುಗಳ ಬಾಲಕ ಬಾಲಕಿಯರ ಬಾಲ್ ಬ್ಯಾಡ್ಮಿಂಟನ್ ಪ೦ದ್ಯಾಟದಲ್ಲಿ ಗ೦ಗೊಳ್ಳಿಯ ಸರಸ್ವತಿ ವಿದ್ಯಾಲಯ ಪದವಿ ಪೂರ್ವ ಕಾಲೇಜಿನ ಬಾಲಕಿಯರ ತಂಡವು ದ್ವಿತೀಯ ಸ್ಥಾನ ಗಳಿಸಿತು.ಟ್ರೋಫಿಯೊಂದಿಗೆ ವಿಜೇತ ಕ್ರೀಡಾಳುಗಳಾದ ಮನಿಷ,ಸಹನಾ,ಅಕ್ಷತಾ,ದಿಶಾ ಭಟ್,ಪ್ರತಿಭಾ,ಅನುಷಾ ಮತ್ತು ರಕ್ಷಿತಾ.ಸರಸ್ವತಿ ವಿದ್ಯಾಲಯ ಆಡಳಿತ ಮಂಡಳಿಯ ಹೆಚ್ ಗಣೇಶ್ ಕಾಮತ್,ಪ್ರಾಂಶುಪಾಲ ಆರ್ ಎನ್ ರೇವಣ್‌ಕರ್,ವಾಮನದಾಸ ಭಟ್ ,ದೈಹಿಕ ಶಿಕ್ಷಣ ನಿರ್ದೇಶಕರಾದ ನಾಗರಾಜ ಶೆಟ್ಟಿ ಉಪಸ್ಥಿತರಿದ್ದರು.

ವರದಿ: ನರೇಂದ್ರ ಎಸ್ ಗಂಗೊಳ್ಳಿ.

Exit mobile version