Kundapra.com ಕುಂದಾಪ್ರ ಡಾಟ್ ಕಾಂ

ಎಸ್‌ಎಸ್‌ಎಲ್‌ಸಿ ಪರೀಕ್ಷೆಯಲ್ಲಿ ಮದರ್ ತೆರೆಸಾ ಮೆಮೋರಿಯಲ್ ಸ್ಕೂಲ್ ವಿದ್ಯಾರ್ಥಿಗಳ ಸಾಧನೆ

ಕುಂದಾಪ್ರ ಡಾಟ್ ಕಾಂ ಸುದ್ದಿ.
ಶಂಕರನಾರಾಯಣ:
ಎಸ್‌ಎಸ್‌ಎಲ್‌ಸಿ ಪರೀಕ್ಷೆಯಲ್ಲಿ ಶಂಕರನಾರಾಯಣದ ಮದರ್ ತೆರೆಸಾ ಮೆಮೋರಿಯಲ್ ಸ್ಕೂಲ್, ಆಂಗ್ಲ ಮಾಧ್ಯಮ ಪ್ರೌಢ ಶಾಲೆಯ ಸಂಜನಾ ವಿ ಶೆಟ್ಟಿ ಮತ್ತು ಸನ್ನಿಧಿ ಕುಲಾಲ್ 625 ಕ್ಕೆ 624 ಅಂಕ ಪಡೆದು ರಾಜ್ಯಮಟ್ಟದಲ್ಲಿ ದ್ವಿತೀಯ ಸ್ಥಾನ ಪಡೆದಿದ್ದಾರೆ.

ಶಾಲೆಯ 32 ಮಂದಿ ವಿದ್ಯಾರ್ಥಿಗಳು ವಿಶಿಷ್ಟ ಶ್ರೇಣಿಯಲ್ಲಿ ತೇರ್ಗಡೆಯಾಗಿದ್ದು ಈ ಪೈಕಿ 13 ವಿದ್ಯಾರ್ಥಿಗಳು 600ಕ್ಕೂ ಅಧಿಕ ಅಂಕ ಗಳಿಸಿದ್ದಾರೆ. 10 ಮಂದಿ ವಿದ್ಯಾರ್ಥಿಗಳು ಪ್ರಥಮ ಶ್ರೇಣಿಯಲ್ಲಿ ತೇರ್ಗಡೆ ಹೊಂದಿ ಸಂಸ್ಥೆಯ ಹೆಮ್ಮೆಗೆ ಪಾತ್ರರಾಗಿದ್ದಾರೆ.

ಇವರಿಗೆ ಸಂಸ್ಥೆಯ ಆಡಳಿತ ಮಂಡಳಿಯವರು, ಮುಖ್ಯೋಪಾಧ್ಯಾಯರು ಹಾಗೂ ಬೋಧಕ ಬೋಧಕೇತರ ವೃಂದದವರು ವಿದ್ಯಾರ್ಥಿಗಳನ್ನು ಅಭಿನಂದಿಸಿದ್ದಾರೆ.

Exit mobile version