Site icon Kundapra.com ಕುಂದಾಪ್ರ ಡಾಟ್ ಕಾಂ

ಕುಂದಾಪುರ: 600ಕ್ಕೂ ಅಧಿಕ ಅಂಕಗಳಿಸಿದ ಎಸ್‌ಎಸ್‌ಎಲ್‌ಸಿ ವಿದ್ಯಾರ್ಥಿಗಳಿಗೆ ಧನಸಹಾಯ

ಕುಂದಾಪ್ರ ಡಾಟ್ ಕಾಂ ಸುದ್ದಿ.
ಕುಂದಾಪುರ:
ಕುಂದಾಪುರದ ಗಿಳಿಯಾರು ಕುಶಲ ಹೆಗ್ಡೆ ಮೆಮೋರಿಯಲ್ ಚಾರಿಟೇಬಲ್ ಟ್ರಸ್ಟ್ ವತಿಯಿಂದ ಜೂನ್ 19 ರಂದು ಎಸ್. ಎಸ್. ಎಲ್. ಸಿ. ಯಲ್ಲಿ ಉತ್ತಮ ಅಂಕ ಪಡೆದ ಅರ್ಹ ವಿದ್ಯಾರ್ಥಿಗಳಿಗೆ ಧನಸಹಾಯ ವಿತರಣೆ ಮಾಡಲಾಗುತ್ತದೆ.

ಎಸ್. ಎಸ್. ಎಲ್. ಸಿ. ಯಲ್ಲಿ ಉತ್ತಮ ಅಂಕ ಪಡೆದ ಮುಂದಿನ ಶಿಕ್ಷಣಕ್ಕೆ ದಾಖಲಾದ 600ಕ್ಕೂ ಹೆಚ್ಚು ಅಂಕ ಗಳಿಸಿದ ಕುಂದಾಪುರ ಹಾಗೂ ಬೈಂದೂರು ತಾಲ್ಲೂಕಿನ ವಿದ್ಯಾರ್ಥಿಗಳು ಅರ್ಜಿ ಸಲ್ಲಿಸಬಹುದು. ಅರ್ಜಿ ಫಾರಂಗಳನ್ನು “ಕುಂದಪ್ರಭ”, ನಾರಾಯಣ ಗುರು ಕಾಂಪ್ಲೆಕ್ಸ್, ವೆಸ್ಟ್ ಬ್ಲಾಕ್ ರೋಡ್, ಕುಂದಾಪುರ ಇಲ್ಲಿ ಪಡೆದು ಅಂಕ ಪಟ್ಟಿ, ಪದವಿ ಪೂರ್ವ ಶಾಲೆಯ ಸೇರ್ಪಡೆ ದಾಖಲೆ ಪತ್ರದೊಂದಿಗೆ ಅರ್ಜಿ ಸಲ್ಲಿಸಬೇಕು. ಅರ್ಜಿ ಸ್ವೀಕರಿಸುವ ಕೊನೆಯ ದಿನಾಂಕ 10 ಜೂನ್, 2022.

ಹೆಚ್ಚಿನ ವಿವರಗಳಿಗೆ ಯು. ಎಸ್. ಶೆಣೈ (9448120765), ಕಾರ್ಯದರ್ಶಿ, ಗಿಳಿಯಾರು ಕುಶಲ ಹೆಗ್ಡೆ ಮೆಮೋರಿಯಲ್ ಟ್ರಸ್ಟ್ ಇವರನ್ನು ಸಂಪರ್ಕಿಸಬಹುದು ಎಂದು ಪ್ರಕಟಣೆ ತಿಳಿಸಿದೆ.

Exit mobile version