Kundapra.com ಕುಂದಾಪ್ರ ಡಾಟ್ ಕಾಂ

ಕೋಡಿ ಲೈಟ್ ಹೌಸ್: ವಿಶ್ವ ಪರಿಸರ ದಿನಾಚರಣೆ ಅಂಗವಾಗಿ ಸ್ವಚ್ಛತಾ ಕಾರ್ಯಕ್ರಮ, ನ್ಯಾಯಾಧೀಶರಿಂದ ಚಾಲನೆ

ಕುಂದಾಪ್ರ ಡಾಟ್ ಕಾಂ ಸುದ್ದಿ.
ಕುಂದಾಪುರ:
ತಾಲೂಕು ಕಾನೂನು ಸೇವೆಗಳ ಸಮಿತಿ ಕುಂದಾಪುರ, ವಕೀಲರ ಸಂಘ ರಿ. ಕುಂದಾಪುರ, ಕ್ಲೀನ್ ಕುಂದಾಪುರ ಪ್ರೋಜೆಕ್ಟ್, ಲಯನ್ಸ್ ಕ್ಲಬ್ ಕುಂದಾಪುರ ಅಮೃತಧಾರಾ, ಎಫ್.ಎಸ್.ಎಲ್ ಇಂಡಿಯಾ, ಎನ್.ಸಿ.ಸಿ-21, ಕರ್ನಾಟಕ ಬೆಟಾಲಿಯನ್ ಉಡುಪಿ ಹಾಗೂ ಕರ್ನಾಟಕ ಅರಣ್ಯ ಇಲಾಖೆ ಕುಂದಾಪುರ ವಲಯ, ಇವರ ಸಂಯುಕ್ತ ಆಶ್ರಯದಲ್ಲಿ ವಿಶ್ವ ಪರಿಸರ ದಿನಾಚರಣೆಯ ಅಂಗವಾಗಿ ಕೋಡಿ ಲೈಟ್ ಹೌಸ್ ಬಳಿ ಹಮ್ಮಿಕೊಂಡ ಸ್ವಚ್ಛತಾ ಕಾರ್ಯಕ್ರಮಕ್ಕೆ ಕುಂದಾಪುರದ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶರಾದ ಅಬ್ದುಲ್ ರಹೀಮ್ ಹುಸೇನ್ ಶೇಖ್ ಅವರು ಚಾಲನೆ ನೀಡಿದರು.

ಕುಂದಾಪುರದ ಹಿರಿಯ ಸಿವಿಲ್ ನ್ಯಾಯಾಧೀಶರು ಹಾಗೂ ತಾಲೂಕು ಕಾನೂನು ಸೇವಾ ಸಮಿತಿ ಅಧ್ಯಕ್ಷರಾದ ರಾಜು ಎನ್, ಪ್ರಧಾನ ಸಿವಿಲ್ & ಜೆ.ಎಮ್.ಎಫ್.ಸಿ ನ್ಯಾಯಾಧೀಶರು ಹಾಗೂ ಕುಂದಾಪುರ ತಾಲೂಕು ಕಾನೂನು ಸೇವಾ ಸಮಿತಿ ಕಾರ್ಯದರ್ಶಿ ಧನೇಶ್ ಮುಗುಳಿ, ಹೆಚ್ಚುವರಿ ಸಿವಿಲ್ & ಜೆ.ಎಮ್.ಎಫ್.ಸಿ ನ್ಯಾಯಾಧೀಶರಾದ ರೋಹಿಣಿ ಡಿ, 2ನೇ ಹೆಚ್ಚುವರಿ ಸಿವಿಲ್ & ಜೆ.ಎಮ್.ಎಫ್.ಸಿ. ನ್ಯಾಯಾಧೀಶರಾದ ವಿದ್ಯಾ ಎ. ಎಸ್ ಅತಿಥಿಗಳಾಗಿದ್ದರು. ಕುಂದಾಪುರ ಉಪ ಅರಣ್ಯ ಸಂರಕ್ಷಣಾಧಿಕಾರಿಗಳಾದ ಆಶಿಶ್ ರೆಡ್ಡಿ ಎಂ.ವಿ, ಕುಂದಾಪುರ ಪುರ ಸಭೆಯ ಮುಖ್ಯಾಧಿಕಾರಿಗಳಾದ ಗೋಪಾಲಕೃಷ್ಣ ಶೆಟ್ಟಿ, ಕುಂದಾಪುರ ವಕೀಲರ ಸಂಘದ ಅಧ್ಯಕ್ಷ ಬನ್ನಾಡಿ ಸೋಮನಾಥ್ ಹೆಗ್ಡೆ, ಕಾರ್ಯದರ್ಶಿ ಜೆ. ಶ್ರೀನಾಥ್ ರಾವ್ ಮುಖ್ಯ ಉಪಸ್ಥಿತರಿದ್ದರು.

ಕುಂದಾಪುರ ವಕೀಲರ ಸಂಘದ ಅಧ್ಯಕ್ಷ ಬನ್ನಾಡಿ ಸೋಮನಾಥ್ ಹೆಗ್ಡೆ, ಕ್ಲೀನ್ ಕುಂದಾಪುರ ಪ್ರಾಜೆಕ್ಟ್ ಸಂಚಾಲಕ ಭರತ್ ಬಂಗೇರ, ಲಯನ್ಸ್ ಕ್ಲಬ್ ಕುಂದಾಪುರ ಅಮೃತಧಾರಾ ಸರಸ್ವತಿ ಜಿ. ಪುತ್ರನ್, ಕುಂದಾಪುರ ರೈಲ್ವೆ ಪ್ರಯಾಣಿಕರ ಹಿತರಕ್ಷಣ ಸಮಿತಿ ಅಧ್ಯಕ್ಷ ಗಣೇಶ್ ಪುತ್ರನ್, ಕೋಡಿ ಚಕ್ರೇಶ್ವರಿ ದೇವಸ್ಥಾನದ ಗೋಪಾಲ ಪೂಜಾರಿ ಎಫ್.ಎಸ್.ಎಲ್ ಇಂಡಿಯಾ ಸದಸ್ಯರು ಹಾಗೂ ಎನ್.ಸಿ.ಸಿ-21, ಕರ್ನಾಟಕ ಬೆಟಾಲಿಯನ್ ಉಡುಪಿಇದರ ವಿದ್ಯಾರ್ಥಿಗಳು ಸ್ವಚ್ಛತಾ ಕಾರ್ಯದಲ್ಲಿ ಪಾಲ್ಗೊಂಡರು.

Exit mobile version