ಕುಂದಾಪ್ರ ಡಾಟ್ ಕಾಂ ಸುದ್ದಿ.
ಗಂಗೊಳ್ಳಿ: ಕಂಚುಗೋಡು ಶ್ರೀ ರಾಮ ದೇವಸ್ಥಾನದ ನೂತನ ಸಮುದಾಯ ಭವನ ನಿರ್ಮಾಣಕ್ಕೆ 35 ಲಕ್ಷ ರೂ. ಅನುದಾನ ಮಂಜೂರಾಗಿದೆ.
ಶಿವಮೊಗ್ಗ ಸಂಸದ ಬಿ. ವೈ. ರಾಘವೇಂದ್ರ ಮತ್ತು ಬೈಂದೂರು ಶಾಸಕ ಬಿ. ಎಂ. ಸುಕುಮಾರ್ ಶೆಟ್ಟಿ ಅವರ ಶಿಫಾರಸ್ಸಿನ ಮೇರೆಗೆ ಸರಕಾರದ ವಾರಾಹಿ ನೀರಾವರಿ ನಿಗಮದಿಂದ ಕಂಚುಗೋಡು ಶ್ರೀ ರಾಮ ದೇವಸ್ಥಾನದ ಬಳಿ ಸಮುದಾಯ ಭವನ ನಿರ್ಮಿಸಲು 20 ಲಕ್ಷ ರೂ. ಅನುದಾನ ಮತ್ತು ಸಚಿವ ಕೋಟ ಶ್ರೀನಿವಾಸ ಪೂಜಾರಿ ಅವರ ಶಿಫಾರಸ್ಸಿನ ಮೇರೆಗೆ ಸಮಾಜ ಕಲ್ಯಾಣ ಇಲಾಖೆ ಮೂಲಕ 15 ಲಕ್ಷ ರೂ. ಅನುದಾನ ಮಂಜೂರಾಗಿದೆ.
ಸಮುದಾಯ ಭವನ ನಿರ್ಮಾಣಕ್ಕೆ ಅನುದಾನ ಮಂಜೂರು ಮಾಡಲು ಸಹಕರಿಸಿದ ಸಂಸದ ಬಿ. ವೈ. ರಾಘವೇಂದ್ರ, ಶಾಸಕ ಬಿ. ಎಂ. ಸುಕುಮಾರ್ ಶೆಟ್ಟಿ ಹಾಗೂ ಸಚಿವ ಕೋಟ ಶ್ರೀನಿವಾಸ ಪೂಜಾರಿ ಮತ್ತು ಬಿಜೆಪಿ ಬೈಂದೂರು ಮಂಡಲ ಅಧ್ಯಕ್ಷ ದೀಪಕುಮಾರ್ ಶೆಟ್ಟಿ ಅವರಿಗೆ ಗಂಗೊಳ್ಳಿ ಪ್ರಾಥಮಿಕ ಮೀನುಗಾರರ ಸಹಕಾರಿ ಸಂಘದ ಅಧ್ಯಕ್ಷ ಸದಾಶಿವ ಖಾರ್ವಿ ಕಂಚುಗೋಡು ಕೃತಜ್ಞತೆ ಸಲ್ಲಿಸಿದ್ದಾರೆ.