ಕುಂದಾಪ್ರ ಡಾಟ್ ಕಾಂ ಸುದ್ದಿ.
ಬೈಂದೂರು: ತಾಲೂಕಿನ ಕೊಡೇರಿ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯ ವಿದ್ಯಾರ್ಥಿಗಳ ಅನುಕೂಲಕ್ಕಾಗಿ ಹಳೆ ವಿದ್ಯಾರ್ಥಿಗಳು ಮತ್ತು ಪೋಷಕರ ಸಹಕಾರದೊಂದಿಗೆ ಒದಗಿಸಲಾದ ವಾಹನ ಸೌಲಭ್ಯವನ್ನು ಉದ್ಘಾಟಿಸಲಾಯಿತು.
ಹಳೆ ವಿದ್ಯಾರ್ಥಿ ಸಂಘದಿಂದ ವಿದ್ಯಾರ್ಥಿಗಳಿಗೆ ಉಚಿತ ನೋಟ್ ಬುಕ್ ವಿತರಿಸಲಾಯಿತು. ಈ ಸಂಧರ್ಭದಲ್ಲಿ ಹಿರಿಯರಾದ ವಾಸುದೇವ್ ಕಾರಂತ್, ಹಳೆ ವಿದ್ಯಾರ್ಥಿ ಸಂಘದ ಅಧ್ಯಕ್ಷರಾದ ಆನಂದ ಪೂಜಾರಿ ಕೊಡೇರಿ, ಶಾಲಾಭಿವೃದ್ಧಿ ಸಮಿತಿ ಅಧ್ಯಕ್ಷರಾದ ಸುರೇಶ ಖಾರ್ವಿ, ಮುಖ್ಯೋಪಧ್ಯಾಯರಾದ ಶ್ಯಾಮಲಾ ರಾವ್, ಎಸ್.ಡಿ,ಎಂ.ಸಿ ಸದಸ್ಯರು, ಸಹ ಶಿಕ್ಷಕರು ಉಪಸ್ಥಿರಿದ್ದರು