ಕುಂದಾಪ್ರ ಡಾಟ್ ಕಾಂ ಸುದ್ದಿ.
ಕುಂದಾಪುರ,ಮೇ10: ಸೈಬರಕಟ್ಟೆ ಮಹಾತ್ಮಾ ಗಾಂಧಿ ಪ್ರೌಢಶಾಲೆಯ 2022-23ನೇ ಸಾಲಿನ ವಿದ್ಯಾರ್ಥಿ ಸಂಸತ್ ಉದ್ಘಾಟನೆ ಹಾಗೂ ಉಚಿತ ನೋಟ್ ಪುಸ್ತಕ ವಿತರಣಾ ಕಾರ್ಯಕ್ರಮ ಗುರುವಾರ ಜರಗಿತು.

ಯಡ್ತಾಡಿ ಗ್ರಾಮ ಪಂಚಾಯತ್ ಅಧ್ಯಕ್ಷರಾದ ಸವಿತಾ ಪುರುಷೋತ್ತಮ್ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿ ಈ ಸಾಲಿನ ಶೈಕ್ಷಣಿಕ ಚಟುವಟಿಕೆಗಳು ದೀಪದಂತೆ ಬೆಳಗಿ ಎಲ್ಲರ ಭವಿಷ್ಯ ಉಜ್ವಲವಾಗಲಿ ಎಂದು ಹಾರೈಸಿದರು.
ಸಮಾರಂಭದ ಅಧ್ಯಕ್ಷತೆಯನ್ನು ಶಾಲಾಭಿವೃದ್ಧಿ ಸಮಿತಿಯ ಕಾರ್ಯದರ್ಶಿ ಕೆ. ಪ್ರಸಾದ್ ಶೆಟ್ಟಿ ವಹಿಸಿದ್ದರು. ಕಾರ್ಯಕ್ರಮದಲ್ಲಿ ಶಾಲಾಭಿವೃದ್ಧಿ ಸಮಿತಿಯ ಅಧ್ಯಕ್ಷ ಕೆ. ರವೀಂದ್ರನಾಥ್ ಶೆಟ್ಟಿ ಶುಭಹಾರೈಸಿದರು.
ವಿದ್ಯಾರ್ಥಿ ಸಂಸತ್ ನ ಪದಾಧಿಕಾರಿಗಳಿಗೆ ಪ್ರತಿಜ್ಞಾ ವಿಧಿಯನ್ನು ಮುಖ್ಯ ಶಿಕ್ಷಕ ಸತೀಶ್ ನಾಯ್ಕ್ ಬೋಧಿಸಿದರು. ದಾನಿಗಳಾದ ರವಿಶಂಕರ್ ಭಟ್ ಶಿರಿಯಾರ ನೀಡಿದ ನೋಟ್ ಪುಸ್ತಕಗಳನ್ನು ಸಂಸ್ಥೆಯ ಎಲ್ಲಾ ವಿದ್ಯಾರ್ಥಿಗಳಿಗೂ ವಿತರಿಸಲಾಯಿತು. ಮುಖ್ಯ ಶಿಕ್ಷಕ ಸತೀಶ್ ನಾಯ್ಕ್ ಸ್ವಾಗತಿಸಿ ಶಿಕ್ಷಕ ಶಿರಿಯಾರ ಗಣೇಶ್ ನಾಯಕ್ ವಂದಿಸಿದರು. ಸಹ ಶಿಕ್ಷಕಿ ಯಶೋದಾ ಕಾರ್ಯಕ್ರಮ ನಿರ್ವಹಿಸಿದರು.