Kundapra.com ಕುಂದಾಪ್ರ ಡಾಟ್ ಕಾಂ

ಭಂಡಾರ್ಕಾರ್ಸ್ ಕಾಲೇಜಿನಲ್ಲಿ ಸೈಬರ್ ಕ್ರೈಮ್ ಜಾಗೃತಿ – ಮಾಹಿತಿ ಕಾರ್ಯಾಗಾರ

ಕುಂದಾಪ್ರ ಡಾಟ್ ಕಾಂ ಸುದ್ದಿ.
ಕುಂದಾಪುರ:
ಸೈಬರ್ ಕ್ರೈಮ್ ದಿನೇ ದಿನೇ ಹೆಚ್ಚುತ್ತಲೇ ಇದೆ. ಸೈಬರ್ ಅಪರಾಧ ಮಾಡಿದವರು ಅವರ ಎಲ್ಲಾ ಕುರುಹುಗಳನ್ನು ಅಳಿಸಿಬಿಡುವುದರಿಂದ ಅವರನ್ನು ಪತ್ತೆಹಚ್ಚುವುದು ಕಷ್ಟವಾಗುತ್ತಿದೆ. ಆಗಾಗಿಯೇ ಸಾರ್ವಜನಿಕರು ಹೆಚ್ಚು ಜಾಗೃತೆಯಿಂದ ತಂತ್ರಜ್ಞಾನವನ್ನು ಬಳಕೆ ಮಾಡಿಕೊಳ್ಳಬೇಕಿದೆ ಎಂದು ವಕೀಲ ರಾಘವೇಂದ್ರ ಚರಣ ನಾವಡ ಹೇಳಿದರು.

ಇಲ್ಲಿನ ಭಂಡಾರ್ಕಾರ್ಸ್ ಕಾಲೇಜಿನಲ್ಲಿ ಮಹಿಳಾ ವೇದಿಕೆಯ ಸಹಯೋಗದಲ್ಲಿ ನಡೆದ ಸೈಬರ್ ಕ್ರೈಮ್ ಜಾಗೃತಿ ಕಾರ್ಯಕ್ರಮದಲ್ಲಿ ಅವರು ಮಾತನಾಡಿ ಇಂದು ಎಲ್ಲಾ ಕೆಲಸಗಳಿಗೂ ನಾವು ಫೋನುಗಳ ಮೇಲೆ ಅವಲಂಬಿತರಾಗಿದ್ದೇವೆ. ಆದರೆ ನಾವು ಹೊಸ ಹೊಸ ಅಪ್ಗಳನ್ನು ಡೌನ್ಲೋಡ್ ಮಾಡುವಾಗ ಅಥವಾ ಎಸ್.ಎಂ.ಎಸ್ ಗಳನ್ನು ಕಳುಹಿಸುವಾಗ ಅತ್ಯಂತ ಎಚ್ಚರದಿಂದ ಇರಬೇಕು ಎಂದರು.

ಪ್ರಾಂಶುಪಾಲರಾದ ಡಾ. ಎನ್.ಪಿ ನಾರಾಯಣ ಶೆಟ್ಟಿ ಅವರು ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು. ಮಹಿಳಾ ವೇದಿಕೆಯ ಅಧ್ಯಕ್ಷರು ಮತ್ತು ಸಂಸ್ಕೃತ ವಿಭಾಗದ ಮುಖ್ಯಸ್ಥರಾದ ಡಾ. ಯಶವಂತಿ. ಕೆ ಮತ್ತು ವಿದ್ಯಾರ್ಥಿ ಕ್ಷೇಮಪಾಲನಾ ಅಧಿಕಾರಿ ಹಾಗೂ ರಾಜ್ಯಶಾಸ್ತ್ರ ವಿಭಾಗದ ಮುಖ್ಯಸ್ಥರಾದ ಡಾ. ಶುಭಂಕರ್ ಆಚಾರಿ ಉಪಸ್ಥಿತರಿದ್ದರು. ವಿದ್ಯಾರ್ಥಿನಿಯರಾದ ಸಿಂಚನ ಮತ್ತು ಸೌಜನ್ಯ ಕಾರ್ಯಕ್ರಮ ನಿರ್ವಹಿಸಿದರು.

Exit mobile version